Thursday, June 18, 2026
spot_imgspot_img
spot_imgspot_img

ಪರಮಾಣು ನೆಲೆಗಳನ್ನು ಗುರಿಯಾಗಿಸಿ ಇರಾನ್ ಮೇಲೆ ಇಸ್ರೇಲ್ ಹಠಾತ್ ದಾಳಿ

- Advertisement -
- Advertisement -

ಜೆರುಸಲೇಂ: ಇರಾನ್‌ನ ಪರಮಾಣು ನೆಲೆಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್ ಸೇನೆಯು ಶುಕ್ರವಾರ ಬೆಳಗಿನ ಜಾವ ಹಠಾತ್ ದಾಳಿ ನಡೆಸಿದೆ.

ಇರಾನ್ ರಾಜಧಾನಿ ಟೆಹ್ರಾನ್ ಸೇರಿದಂತೆ ಹಲವು ಕಡೆಗಳಲ್ಲಿ ಸ್ಫೋಟದ ಸದ್ದುಗಳು ಕೇಳಿವೆ. ಈ ದಾಳಿಯಲ್ಲಿ ಇರಾನ್ ಸೇನೆಯ ಪ್ರಮುಖ ಅಧಿಕಾರಿಗಳು, ಪರಮಾಣು ವಿಜ್ಞಾನಿಗಳು ಸೇರಿದಂತೆ ಅನೇಕ ಪ್ರಮುಖರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಈ ದಾಳಿಯಲ್ಲಿ ಇರಾನ್‌ಗೆ ಭಾರೀ ಹಾನಿಯಾಗಿದೆ ಎಂದು ಇಸ್ರೇಲ್ ಹೇಳಿಕೊಂಡಿದೆ.

ಇರಾನ್ ಪರಮಾಣು ನೆಲೆಗಳನ್ನು ಗುರಿಯಾಗಿಸಿ ನಮ್ಮ ಸೇನೆ ಹಠಾತ್ ದಾಳಿ ನಡೆಸಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಇರಾನ್ ಮೇಲಿನ ದಾಳಿ ಮುಂದುವರಿಯಲಿದೆ ಎಂದೂ ಅವರು ಘೋಷಿಸಿದ್ದಾರೆ.

ಪರಮಾಣು ಚಟುವಟಿಕೆಗಳನ್ನು ಇರಾನ್ ಹೆಚ್ಚಿಸಿರುವುದು ಉದ್ವಿಗ್ನ ಪರಿಸ್ಥಿತಿಗೆ ಕಾರಣವಾಗಿತ್ತು. ಅದರ ಬೆನ್ನಲ್ಲೇ ಈ ದಾಳಿ ನಡೆದಿದೆ. ಇರಾನ್ ಶೀಘ್ರದಲ್ಲೇ ಅತ್ಯಂತ ಬಲಿಷ್ಠ ಪರಮಾಣು ಶಕ್ತಿಯಾಗಲಿದೆ ಎಂಬ ವರದಿಗಳು ಇತ್ತೀಚೆಗೆ ನಿರಂತರವಾಗಿ ಬಿತ್ತರವಾಗುತ್ತಿದ್ದವು.

- Advertisement -

Related news

error: Content is protected !!