Saturday, June 28, 2025
spot_imgspot_img
spot_imgspot_img

ಗಾಜಾದ ಮಸೀದಿ, ಶಾಲೆ ಮೇಲೆ ಇಸ್ರೇಲ್ ವೈಮಾನಿಕ ದಾಳಿ; 18 ಮಂದಿ ಸಾವು

- Advertisement -
- Advertisement -

ಗಾಜಾ: ಇಂದು ಬೆಳಗ್ಗೆ ಕೇಂದ್ರ ಗಾಜಾದಲ್ಲಿ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ 18 ಜನರು ಸಾವನ್ನಪ್ಪಿದ್ದಾರೆ ಎಂದು ಪ್ಯಾಲೇಸ್ಟಿನಿಯನ್ ವೈದ್ಯಕೀಯ ಅಧಿಕಾರಿಗಳು ತಿಳಿಸಿದ್ದಾರೆ.

ದೇರ್ ಅಲ್-ಬಾಲಾಹ್ ಪಟ್ಟಣದ ಅಲ್-ಅಕ್ಸಾ ಹುತಾತ್ಮರ ಆಸ್ಪತ್ರೆಯ ಬಳಿ ಸ್ಥಳಾಂತರಗೊಂಡ ಜನರಿಗೆ ಆಶ್ರಯ ನೀಡುತ್ತಿದ್ದ ಮಸೀದಿಯ ಮೇಲೆ ದಾಳಿ ಸಂಭವಿಸಿದೆ ಎಂದು ಆಸ್ಪತ್ರೆಯ ಹೇಳಿಕೆಯಲ್ಲಿ ತಿಳಿಸಿದೆ.

ಮೃತರೆಲ್ಲರೂ ಪುರುಷರು ಎಂದು ಆಸ್ಪತ್ರೆ ದಾಖಲೆಗಳು ತೋರಿಸಿವೆ. ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಇರಾನ್‌ ದಾಳಿಗೆ ಪ್ರತೀಕಾರವಾಗಿ ಇಸ್ರೇಲ್‌ ದಾಳಿ ನಡೆಸಿದ್ದು ಲೆಬನಾನ್‌ ಹಾಗೂ ಗಾಜಾ ಪಟ್ಟಿಯ ಮೇಲೆ ಬಾಂಬ್‌ ಸುರಿಮಳೆ ಗೈದಿದೆ.

ದಕ್ಷಿಣ ಲೆಬನಾನ್‌ನಲ್ಲಿ ಉಗ್ರಗಾಮಿ ಗುಂಪಿನ ಸ್ಥಾನಗಳ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಸುಮಾರು 2000 ಹೆಜ್ಬೊಲ್ಲಾ ಹೋರಾಟಗಾರರು ಮತ್ತು ನಾಗರಿಕರು ಸಾವನ್ನಪ್ಪಿದ್ದಾರೆ.

- Advertisement -

Related news

error: Content is protected !!