Friday, July 24, 2026
spot_imgspot_img
spot_imgspot_img

ಲೆಬನಾನ್‌ನಲ್ಲಿ ಪ್ಯಾಲೆಸ್ತೀನಿಯನ್ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ಡ್ರೋನ್ ದಾಳಿ; 13 ಜನ ಸಾವು, ಹಲವರಿಗೆ ಗಾಯ

- Advertisement -
- Advertisement -

ರಮಲ್ಲಾ: ದಕ್ಷಿಣ ಲೆಬನಾನ್‌ನಲ್ಲಿರುವ ಪ್ಯಾಲೆಸ್ತೀನಿಯರ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದ್ದು 13 ಮಂದಿ ಸಾವನ್ನಪ್ಪಿ, ಹಲವು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

ಕರಾವಳಿ ನಗರ ಸಿಡಾನ್‌ನ ಹೊರವಲಯದಲ್ಲಿರುವ ಐನ್ ಎಲ್-ಹಿಲ್ವೆ ನಿರಾಶ್ರಿತರ ಶಿಬಿರದಲ್ಲಿರುವ ಮಸೀದಿಯ ಪಾರ್ಕಿಂಗ್ ಸ್ಥಳದಲ್ಲಿ ಡ್ರೋನ್ ದಾಳಿ ನಡೆದಿದೆ. ಇದು ಒಂದು ವರ್ಷದ ಹಿಂದೆ ಇಸ್ರೇಲ್-ಹಿಜ್ಬುಲ್ಲಾ ನಡುವೆ ಕದನ ವಿರಾಮದ ನಂತರ ಲೆಬನಾನ್ ಮೇಲೆ ನಡೆದ ಅತ್ಯಂತ ಭೀಕರ ದಾಳಿಯಾಗಿದೆ.

ಇಸ್ರೇಲ್ ಮತ್ತು ಅದರ ಸೈನ್ಯದ ವಿರುದ್ಧ ದಾಳಿಗೆ ಸಿದ್ಧತೆ ನಡೆಸುತ್ತಿದ್ದ ಹಮಾಸ್ ತರಬೇತಿ ಆವರಣದ ಮೇಲೆ ದಾಳಿ ನಡೆಸಿದೆ. ಹಮಾಸ್ ಗುಂಪು ಎಲ್ಲೆಲ್ಲಿ ಕಾರ್ಯನಿರ್ವಹಿಸುತ್ತಿದೆಯೋ ಅಲ್ಲೆಲ್ಲಾ ಅದರ ವಿರುದ್ಧ ಇಸ್ರೇಲ್ ಸೇನೆಯು ಕಾರ್ಯಾಚರಣೆ ಮುಂದುವರಿಸಲಿದೆ ಎಂದು ಇಸ್ರೇಲ್ ಸೇನೆ ತಿಳಿಸಿದೆ.

- Advertisement -

Related news

error: Content is protected !!