Thursday, May 2, 2024
spot_imgspot_img
spot_imgspot_img

ಇಸ್ರೋ ಅಧ್ಯಕ್ಷ ಎಸ್​ ಸೋಮನಾಥ್​ಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದ ರಾಜ್ಯಪಾಲರು

- Advertisement -G L Acharya panikkar
- Advertisement -

ರಾಜಭವನದಲ್ಲಿ ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್​ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​​ ಗೌರವ ಡಾಕ್ಟರೇಟ್ ಪ್ರದಾನ ಮಾಡಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದ 58ನೇ ಘಟಿಕೋತ್ಸವ ಅಂಗವಾಗಿ ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಅವರಿಗೆ ಗೌರವ ಡಾಕ್ಟರೇಟ್ ಘೋಷಿಸಲಾಗಿತ್ತು. ಆದರೆ ಘಟಿಕೋತ್ಸವ ದಿನದಂದು ಎಸ್.ಸೋಮನಾಥ್ ಭಾಗವಹಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಬುಧವಾರ ರಾಜಭವನದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗಿದೆ.

ಜಿಎಸ್​ಎಲ್​ವಿ ಮಾರ್ಕ್ 3 (GSLV Mk-III) ಲಾಂಚರ್ ರೂಪಿಸುವಲ್ಲಿ ಸೋಮನಾಥ್ ಮುಖ್ಯಪಾತ್ರ ವಹಿಸಿದ್ದರು. ತಮ್ಮ ವೃತ್ತಿ ಜೀವನದ ಆರಂಭದ ದಿನಗಳಲ್ಲಿ ಪಿಎಸ್​ಎಲ್​ವಿ (Polar Satellite Launch Vehicle – PSLV) ಉಡಾವಣಾ ವಾಹನ ರೂಪಿಸುವ ತಂಡದಲ್ಲಿ ಟೀಂ ಲೀಡರ್ ಆಗಿ ಕಾರ್ಯನಿರ್ವಹಿಸಿದ್ದಾರೆ.

ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿಯಾಗಿ ಮೂರು ವರ್ಷ ಕೆಲಸ ಮಾಡಿದ್ದರು. ಬಾಹ್ಯಾಕಾಶ ಆಯೋಗದಲ್ಲಿ ಮೂರು ವರ್ಷಗಳ ಅವಧಿಗೆ ಅಧ್ಯಕ್ಷರಾಗಿದ್ದರು. ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದ ನಿರ್ದೇಶಕರಾಗಿ ಜನವರಿ 22, 2018ರಿಂದ ಕಾರ್ಯನಿರ್ವಹಿಸುತ್ತಿದ್ದರು. 2022ರಲ್ಲಿ ಅವರು ಇಸ್ರೋ ಅಧ್ಯಕ್ಷರಾದರು.

ಕೇರಳದ ಕೊಲ್ಲಂನಲ್ಲಿರುವ ಟಿಕೆಂಎ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ ಓದಿರುವ ಸೋಮನಾಥ್, ಬೆಂಗಳೂರಿನ ಇಂಡಿಯನ್ ಇನ್​ಸ್ಟಿಟ್ಯೂಟ್​ ಆಫ್ ಸೈನ್ಸ್​ನಲ್ಲಿ ಏರೊಸ್ಪೇಸ್ ಎಂಜಿನಿಯರಿಂಗ್​ನಲ್ಲಿ ಸ್ನಾತಕೋತ್ತರ ಪದವಿ ಪಡೆದುಕೊಂಡಿದ್ದಾರೆ. ಬಳಿಕ ವಿಕ್ರಂ ಸಾರಾಭಾಯ್ ಬಾಹ್ಯಾಕಾಶ ಕೇಂದ್ರಕ್ಕೆ 1985ರಲ್ಲಿ ಸೇರಿಕೊಂಡರು.

ಇಸ್ರೋದ ಮಹತ್ವಾಕಾಂಕ್ಷಿ ಪ್ರಯತ್ನವಾಗಿದ್ದ ಚಂದ್ರಾಯಣ-2 ಬಾಹ್ಯಾಕಾಶ ನೌಕೆಯ ಲ್ಯಾಂಡರ್​ಗೆ ಬಳಸಿದ್ದ ಎಂಜಿನ್​ಗಳ ಅಭಿವೃದ್ಧಿ ಮತ್ತು ಜಿಸ್ಯಾಟ್-9ರಲ್ಲಿ ಬಳಕೆಯಾದ ಎಲೆಕ್ಟ್ರಿಕ್ ಪ್ರೊಪಲ್ಷನ್ ವ್ಯವಸ್ಥೆಯನ್ನು ರೂಪಿಸಿದ ಶ್ರೇಯವೂ ಸೋಮನಾಥ್ ಅವರಿಗೆ ಸೇರುತ್ತದೆ.

ಸೋಮನಾಥ್​ ಅವರಿಗೆ ಅನೇಕ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಪ್ರಶಸ್ತಿಗಳು ಲಭಿಸಿವೆ. ಭಾರತ ಸರ್ಕಾರದಿಂದ ಪದ್ಮಶ್ರೀ ಪ್ರಶಸ್ತಿಯನ್ನೂ ಸಹ ನೀಡಿ ಗೌರವಿಸಲಾಗಿದೆ.

- Advertisement -

Related news

error: Content is protected !!