- Advertisement -
- Advertisement -
ವರದಿ: ನ್ಯೂಸ್ ಡೆಸ್ಕ್, ವಿ ಟಿವಿ
ಮುಂಬೈ: ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್ ಹಾಗೂ ಮಗ ಅಭಿಷೇಕ್ ಬಚ್ಚನ್ ಗೆ ಕೊರೊನಾ ತಗುಲಿದ ಬಳಿಕ ಐಶ್ವರ್ಯ ರೈ ಹಾಗೂ ಮಗಳು ಆರಾಧ್ಯಳಿಗೂ ಕೊರೊನಾ ಪಾಸಿಟಿವ್ ಕಂಡುಬಂದಿದೆ.

ಶನಿವಾರ ಸಂಜೆ ಅಮಿತಾಭ್ ಬಚ್ಚನ್ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರನ್ನು ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆ ಬಳಿಕ ಕೊರೊನಾ ಟೆಸ್ಟ್ ಮಾಡಿಸಿದಾಗ ವರದಿ ಪಾಸಿಟಿವ್ ಬಂದಿದೆ. ಬಳಿಕ ಕುಟುಂಬಸ್ಥರಿಗೆ ಕೊರೊನಾ ಪರೀಕ್ಷೆ ಮಾಡಿದಾಗ ನಿನ್ನೆ ರಾತ್ರಿ ಅಭಿಷೇಕ್ ಬಚ್ಚನ್ ಅವರಿಗೂ ಸೋಂಕು ತಗುಲಿರುವುದು ದೃಢವಾಗಿತ್ತು.

ಇದೀಗ ಅಭಿಷೇಕ್ ಪತ್ನಿ ಐಶ್ವರ್ಯ ರೈ ಹಾಗೂ ಮಗಳು ಆರಾಧ್ಯಗಳಿಗೂ ಕೊರೊನಾ ಪಾಸಿಟಿವ್ ಬಂದಿದೆ. ಇನ್ನು ಅಮಿತಾಭ್ ಬಚ್ಚನ್ ಅವರ ಪತ್ನಿ ಜಯಾ ಬಚ್ಚನ್ ಅವರ ಕೊರೊನಾ ವರದಿ ನೆಗೆಟಿವ್ ಬಂದಿದೆ ಎಂದು ತಿಳಿದುಬಂದಿದೆ.

- Advertisement -