Tuesday, May 14, 2024
spot_imgspot_img
spot_imgspot_img

ದ್ವಿಚಕ್ರ ವಾಹನದಲ್ಲಿ 6 ವರ್ಷ ಮೇಲ್ಪಟ್ಟ ಮಕ್ಕಳಿಗೆ ಹೆಲೈಟ್ ಧರಿಸುವುದು ಕಡ್ಡಾಯ

- Advertisement -G L Acharya panikkar
- Advertisement -

ಮಕ್ಕಳನ್ನು ದ್ವಿಚಕ್ರ ವಾಹನದಲ್ಲಿ ಶಾಲೆಗೆ ಕರೆದುಕೊಂಡು ಬರುವ ಪೋಷಕರು ಮಕ್ಕಳಿಗೆ ಅಲ್ಲದೇ ತಾವು ಕೂಡ ಹೆಲೈಟ್ ಧರಿಸದೇ ಬರುತ್ತಿದ್ದಾರೆ.
ಜೊತೆಗೆ ಶಾಲಾ ಅಟೋ, ಖಾಸಗಿ ಕಾರು. ಟಿಟಿ ವಾಹನಗಳಲ್ಲಿ ನಿಗದಿತ ಮಕ್ಕಳಿಗಿಂತ ಹೆಚ್ಚಿನ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದಾರೆ ಎಂದು ಸಾಕಷ್ಟು ದೂರುಗಳು ಬಂದಿರುವುದಾಗಿ ಪೊಲೀಸ್ ಇಲಾಖೆ ತಿಳಿಸಿದೆ.

ಮಕ್ಕಳನ್ನು ಶಾಲೆಗೆ ಬಿಡಲು ದ್ವಿಚಕ್ರ ವಾಹನದಲ್ಲಿ ಬರುವ ಪೋಷಕರು ಕಡ್ಡಾಯವಾಗಿ ಹೆಲೈಟ್ ಧರಿಸಬೇಕು. 6 ವರ್ಷ ಮೇಲ್ಪಟ್ಟ ಮಕ್ಕಳು ಸಹ ಇನ್ಮುಂದೆ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಇಷ್ಟಬಂದಂತೆ ಖಾಸಗಿ ವಾಹನಗಳಲ್ಲಿ ಹೆಚ್ಚಿನ ಮಕ್ಕಳನ್ನು ಕರೆದುಕೊಂಡು ಹೋಗುವಂತಿಲ್ಲ ಎಂದು ಉಲ್ಲೇಖಿಸಲಾಗಿದೆ.
ಶಾಲಾ ಅಟೋ, ಖಾಸಗಿ ಕಾರು, ಟಿಟಿ ವಾಹನಗಳಲ್ಲಿ ನಿಗದಿತ ಮಿತಿಗಿಂತ ಹೆಚ್ಚಿನ ಮಕ್ಕಳನ್ನು ಶಾಲೆಗೆ ಕರೆದೊಯ್ಯುವವರು ಮತ್ತು ಮೂರಕ್ಕೂ ಹೆಚ್ಚು ಮಕ್ಕಳನ್ನು ಗಾಡಿಯಲ್ಲಿ ಕರೆದುಕೊಂಡು ಹೋಗುವ ಪೋಷಕರ ವಿರುದ್ಧವೂ ಕ್ರಮಕೈಗೊಳ್ಳಲಾಗುತ್ತದೆ.

ಸಾಕಷ್ಟು ದೂರುಗಳು ಬಂದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಸಾರ್ವಜನಿಕರು ಕಡ್ಡಾಯವಾಗಿ ಹೆಲೈಟ್ ಧರಿಸುವಂತೆ ಎಚ್ಚರಿಸಿದ್ದು, ಶಾಲೆಗಳ ಬಳಿ ಸ್ಪೆಷಲ್ ಡ್ರೈವ್ ಮಾಡಲು ಟ್ರಾಫಿಕ್ ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!