Sunday, October 6, 2024
spot_imgspot_img
spot_imgspot_img

ನಟ ದರ್ಶನ್‌ಗೆ ಜೈಲೂಟ : ಮನೆಯೂಟಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿ ವಾಪಸ್‌

- Advertisement -
- Advertisement -

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್‌ಗೆ ಸದ್ಯಕ್ಕೆ ಮನೆಯೂಟ ತಿನ್ನುವ ಭಾಗ್ಯ ಸಿಗುವಂತಿಲ್ಲ. ಯಾಕೆಂದರೆ, ಮನೆಯೂಟ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಮ್ಯಾಜಿಸ್ಟ್ರೇಟ್ ಕೋರ್ಟ್‌ ವಜಾಗೊಳಿಸಿದ ಬೆನ್ನಲ್ಲೇ ಇದೀಗ ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯನ್ನು ದರ್ಶನ್‌ ಪರ ವಕೀಲರು ವಾಪಸ್‌ ಪಡೆದಿದ್ದಾರೆ.

ವಿಚಾರಣೆಗೆ ಬರುತ್ತಿದ್ದಂತೆ ಮೆಮೋ‌ ಸಲ್ಲಿಸಿ ಅರ್ಜಿಯನ್ನು ಹಿಂದಕ್ಕೆ ಪಡೆಯಲಾಗಿದೆ. ತಾಂತ್ರಿಕ ಕಾರಣ ನೀಡಿ ದರ್ಶನ್‌ ಪರ ವಕೀಲರು ಅರ್ಜಿಯನ್ನು ಹಿಂದಕ್ಕೆ ಪಡೆದಿದ್ದು ಮತ್ತೆ ಹೊಸ ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ.

ಮನೆಯೂಟ, ಹಾಸಿಗೆ, ಪುಸ್ತಕಗಳಿಗೆ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಮ್ಯಾಜಿಸ್ಟ್ರೇಟ್‌ ಕೋರ್ಟ್ ಜುಲೈ 25 ರಂದು ವಜಾಗೊಳಿಸಿತ್ತು. ಅರ್ಜಿ ವಜಾಗೊಂಡ ಈ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ದರ್ಶನ್ ಪರ ವಕೀಲರು ಮೇಲ್ಮನವಿ ಸಲ್ಲಿಸಿದ್ದರು.

ಕಾನೂನಿಗೆ ಎಲ್ಲರೂ ಒಂದೇ, ಕೈದಿಗಳಲ್ಲಿ ಯಾವುದೇ ಭೇದವಿಲ್ಲ. ಆಸ್ತಿ ಅಂತಸ್ತು ನೋಡಿ ಜೈಲಿನಲ್ಲಿ ಸೌಕರ್ಯ ನೀಡಲು ಸಾಧ್ಯವಿಲ್ಲ. ಅಗತ್ಯವಿದ್ದಾಗ ಮಾತ್ರ ವಿಚಾರಣಾಧೀನ ಕೈದಿಗಳಿಗೆ ಮನೆಯೂಟ ನೀಡಬಹುದು. ಆದರೆ ಕೊಲೆ ಪ್ರಕರಣದ ಆರೋಪಿಗಳಿಗೆ ಇದು ಅನ್ವಯಿಸುವುದಿಲ್ಲ ಎಂದು ಹೇಳಿ ಕೋರ್ಟ್‌ ಅರ್ಜಿಯನ್ನು ವಜಾಗೊಳಿಸಿತ್ತು.

- Advertisement -

Related news

error: Content is protected !!