Sunday, July 26, 2026
spot_imgspot_img
spot_imgspot_img

ಜೈಪುರ: ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು

- Advertisement -
- Advertisement -

ಜೈಪುರ: ಜೈಪುರದಲ್ಲಿ ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ನಟಿ ಮತ್ತು ರೂಪದರ್ಶಿ ಹರ್ಷಿಲ್ ಕಾಲಿಯಾ ಸಾವನ್ನಪ್ಪಿದ್ದಾರೆ.

ಜೈಪುರದ ಶಿಪ್ರಾ ಪಾತ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಕಾಲಿಯಾ ರಾತ್ರಿ 11:30 ರ ಸುಮಾರಿಗೆ ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದಾಗ ಅವರ ವಾಹನವು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಪಲ್ಟಿಯಾಗಿದೆ.

ಸ್ಥಳೀಯ ನಿವಾಸಿಗಳು ವಾಹನವನ್ನು ಸರಿಪಡಿಸಿ ಕಾಲಿಯಾಳನ್ನು ರಕ್ಷಿಸಿದರು. ನಂತರ ನಟಿಯನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ತಲೆಗೆ ತೀವ್ರ ಪೆಟ್ಟಾಗಿದ್ದು, ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಆಸ್ಪತ್ರೆಯ ವೈದ್ಯರು ಆಕೆ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.

ಪೊಲೀಸರು ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಿದ್ದಾರೆ. ಕಾಲಿಯಾ ‘ಕ್ರೈಮ್ ನೆಕ್ಸ್ಟ್ ಡೋರ್’ ವೆಬ್ ಸರಣಿಯಲ್ಲಿ ಕೆಲಸ ಮಾಡಿದ್ದರು. ಸುದ್ದಿ ವಾಹಿನಿಯ ನಿರೂಪಕಿಯಾಗಿ ಸೇವೆ ಸಲ್ಲಿಸಿದ್ದರು. ಹಲವಾರು ರಾಜಸ್ಥಾನಿ ಹಾಡುಗಳಲ್ಲಿ ಪ್ರಮುಖ ಮಹಿಳಾ ಪಾತ್ರವನ್ನು ನಿರ್ವಹಿಸಿದ್ದರು. ಇತ್ತೀಚೆಗೆ, ಮಾಡೆಲಿಂಗ್‌ನಲ್ಲಿ ತೊಡಗಿಸಿಕೊಂಡಿದ್ದರು. ಕಾಲಿಯಾ ಅವರ ತಂದೆ ಪತ್ರಿಕೋದ್ಯಮ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದು, ಖಾಸಗಿ ಪತ್ರಿಕೆಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ವರದಿ ಮೂಲಕ ತಿಳಿದು ಬಂದಿದೆ.

- Advertisement -

Related news

error: Content is protected !!