Saturday, April 20, 2024
spot_imgspot_img
spot_imgspot_img

ಜಮ್ಮು-ಕಾಶ್ಮೀರ ಪುನರ್ ಸಂಘಟನೆ (ತಿದ್ದುಪಡಿ) ಮಸೂದೆ ಅಂಗೀಕಾರ

- Advertisement -G L Acharya panikkar
- Advertisement -

ನವದೆಹಲಿ: ಅರುಣಾಚಲ ಪ್ರದೇಶ, ಗೋವಾ, ಮಿಜೋರಾಂ ಕೇಂದ್ರಾಡಳಿತ ಪ್ರದೇಶದ ಕೇಡರ್‌‌ ಜೊತೆ ಜಮ್ಮು-ಕಾಶ್ಮೀರ ಕೇಡರ್‌‌ನ ನಾಗರಿಕ ಸೇವಾ ಅಧಿಕಾರಿಗಳನ್ನು ವಿಲೀನಗೊಳಿಸುವ ಸುಗ್ರೀವಾಜ್ಞೆಯನ್ನು ಬದಲಾಯಿಸುವ ಜಮ್ಮು-ಕಾಶ್ಮೀರ ತಿದ್ದುಪಡಿ ಮಸೂದೆ 2021ನ್ನು ರಾಜ್ಯಸಭೆ ಅಂಗೀಕರಿಸಿದೆ.

ಜಮ್ಮು-ಕಾಶ್ಮೀರದ ಮೇಲೆ ಭಾರತದ ಸಂವಿಧಾನವು ಈಗ ಸಂಪೂರ್ಣವಾಗಿ ಅನ್ವಯವಾಗುತ್ತಿದ್ದು, ಈ ಮಸೂದೆಯ ಮೂಲಕ ಕೇಂದ್ರಾಡಳಿತ ಪ್ರದೇಶದ ಅನುಭವ ಹೊಂದಿರುವ ಜಮ್ಮು-ಕಾಶ್ಮೀರದ ಅಧಿಕಾರಗಳ ಲಭ್ಯತೆಯನ್ನು ಒದಗಿಸುತ್ತದೆ ಎಂದು ಗೃಹ ವ್ಯವಹಾರಗಳ ರಾಜ್ಯ ಸಚಿವ ಜಿ. ಕಿಶನ್‌‌‌ ರೆಡ್ಡಿ ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಸುಮಾರು 170 ಕೇಂದ್ರ ಕಾನೂನುಗಳನ್ನು ಜಾರಿಗೊಳಿಸಲಾಗುತ್ತಿದೆ. ಈ ಮಸೂದೆಯು ಜಮ್ಮು-ಕಾಶ್ಮೀರ ಹಾಗೂ ಲೇಹ್ ಕೇಂದ್ರಾಡಳಿತ ಪ್ರದೇಶಗಳಲ್ಲಿನ ಅಧಿಕಾರಿಗಳ ಬಲವನ್ನು ಹೆಚ್ಚಿಸುತ್ತದೆ ಎಂದಿದ್ದಾರೆ.

- Advertisement -

Related news

error: Content is protected !!