- Advertisement -
- Advertisement -
ಕಾಶ್ಮೀರ್: ಜಮ್ಮು-ಕಾಶ್ಮೀರ್ ಸೋಪೋರ್ ಜಿಲ್ಲೆಯ ವಾಟರ್ ಗಾಮ್ ಮುನ್ಸಿಪಲ್ ಸಮಿತಿಯ ಉಪಾಧ್ಯಕ್ಷ, ಬಿಜೆಪಿ ಮುಖಂಡ ಮೆಹ್ರಾಜುದೀನ್ ಮಲ್ಲಾ ಅವರನ್ನು ಬುಧವಾರ ಬೆಳಗ್ಗೆ ಅಪರಿಚಿತ ವ್ಯಕ್ತಿಗಳು ಅಪಹರಿಸಿದ್ದಾರೆ.ಬಂಡಿಪೋರಾ ಜಿಲ್ಲೆಯಲ್ಲಿ ಬಿಜೆಪಿ ನಾಯಕ ವಾಸಿಮ್ ಬ್ಯಾರಿ, ಅವರ ತಂದೆ ಮತ್ತು ಸಹೋದರನನ್ನು ಭಯೋತ್ಪಾದಕರು ಕೊಂದ ಕೆಲವೇ ದಿನಗಳ ನಂತರ ಈ ಘಟನೆ ನಡೆದಿದೆ.
ಮೆಹ್ರಾ ಅವರನ್ನು ಕಿಡ್ನಾಪ್ ಮಾಡಿರುವ ಆರೋಪಿಗಳ ಬಂಧನಕ್ಕಾಗಿ ಭದ್ರತಾ ಪಡೆಯ ನೆರವು ಕೋರಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ನಾಪತ್ತೆಯಾದ ಮೆಹ್ರಾ ಪತ್ತೆಗಾಗಿ ತೀವ್ರ ಶೋಧ ಕಾರ್ಯ ನಡೆಯುತ್ತಿದೆ.ಬಿಜೆಪಿ ಸದಸ್ಯರ ಹತ್ಯೆಯ ನಂತರ, ಅನೇಕ ರಾಜಕೀಯ ಮುಖಂಡರು ಮತ್ತು ಕಾರ್ಯಕರ್ತರು ವಿಶೇಷವಾಗಿ ಸೂಕ್ಷ್ಮ ಪ್ರದೇಶಗಳಲ್ಲಿ ವಾಸಿಸುವವರಿಗೆ ಭದ್ರತೆ ನೀಡುವಂತೆ ಒತ್ತಾಯಿಸಿದ್ದಾರೆ.
- Advertisement -