Saturday, April 27, 2024
spot_imgspot_img
spot_imgspot_img

ಜನವರಿಯಿಂದ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ವೈದ್ಯಕೀಯ ಪರೀಕ್ಷೆ

- Advertisement -G L Acharya panikkar
- Advertisement -

ಬೆಂಗಳೂರು: ಹೆಮ್ಮಾರಿ ಕೊರೊನಾ ಹೊಡೆತದಿಂದ ಕಂಗೆಟ್ಟಿರೋ ರಾಜ್ಯದ ಜನರಿಗೆ ಆರೋಗ್ಯ ಇಲಾಖೆ ಗುಡ್ ನ್ಯೂಸ್​ ನೀಡಲು ಸಿದ್ಧವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಸಾರ್ವಜನಿಕರ ಆರೋಗ್ಯ ಬಲವರ್ಧನೆಗೆ ಸರ್ಕಾರ ಚಿಂತನೆ ನಡೆಸಿದ್ದು 2021ರ ಜನವರಿಯಿಂದ ರಾಜ್ಯದ ಎಲ್ಲಾ ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ವೈದ್ಯಕೀಯ ಪರೀಕ್ಷೆಗಳನ್ನ ನಡೆಸಲು ಆರೋಗ್ಯ ಇಲಾಖೆ ಮುಂದಾಗಿದೆ ಎಂದು ಹೇಳಲಾಗುತ್ತಿದೆ.

ಸಿ.ಟಿ ಸ್ಕ್ಯಾನ್​, ರಕ್ತ ಪರೀಕ್ಷೆ ಸೇರಿದಂತೆ ಎಲ್ಲ ರೀತಿಯ ಆರೋಗ್ಯ ಸೇವೆ ಉಚಿತವಾಗಿ ನಡೆಸಲು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಸೂಚಿಸಿದ್ದಾರೆ ಎನ್ನಲಾಗಿದೆ. ಈ ಯೋಜನೆಯಿಂದಾಗಿ ಎಪಿಎಲ್ ಕಾರ್ಡುದಾರರಿಗೆ ಈವರೆಗೆ ವಿಧಿಸಲ್ಪಡುತ್ತಿದ್ದ ಅಲ್ಪ ಪ್ರಮಾಣದ ಶುಲ್ಕವೂ ರದ್ದಾಗಲಿದೆ.

ಈ ಬಗ್ಗೆ ಆಲ್ ಇಂಡಿಯಾ ರೇಡಿಯೋ ಟ್ವಿಟರ್ ಖಾತೆಯಲ್ಲಿ ಅಧಿಕೃತ ಮಾಹಿತಿ ಪ್ರಕಟವಾಗಿದೆ. ಆರೋಗ್ಯ ಇಲಾಖೆಯ ಮಹತ್ವದ ಆದೇಶವೆಂದು ಹೇಳಲಾಗುತ್ತಿದೆ.

- Advertisement -

Related news

error: Content is protected !!