Tuesday, June 23, 2026
spot_imgspot_img
spot_imgspot_img

ವಿಟ್ಲ: ಜ.30 ರಂದು ಶ್ರೀ ವಿಷ್ಣುಮೂರ್ತಿ ಯುವಕ ವೃಂದ(ರಿ.) ವಿಷ್ಣುನಗರ ಇದರ ನೇತೃತ್ವದಲ್ಲಿ ಭಜನೋತ್ಸವ ಹಾಗೂ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

- Advertisement -
- Advertisement -

ವಿಟ್ಲ: ಶ್ರೀ ವಿಷ್ಣುಮೂರ್ತಿ ಯುವಕ ವೃಂದ(ರಿ.) ವಿಷ್ಣುನಗರ ಇದರ ನೇತೃತ್ವದಲ್ಲಿ ಹಾಗೂ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಆಡಳಿತ ಸಮಿತಿ ಮತ್ತು ಎಲ್ಲಾ ಉಪಸಮಿತಿಗಳು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ವಿಟ್ಲ ಇವರ ಸಹಕಾರದೊಂದಿಗೆ ಭಜನೋತ್ಸವ ಹಾಗೂ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಜ.30 ರಂದು ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ವೇಣುಗೋಪಾಲ ಶೆಟ್ಟಿ, ಅಧ್ಯಕ್ಷರು ಜಾತ್ರೋತ್ಸವ ಸಮಿತಿ ನೆರವೇರಿಸಲಿದ್ದಾರೆ. ದಯಾನಂದ ಶೆಟ್ಟಿ ಉಜಿರೆಮಾರ್, ಮೋನಪ್ಪ ಗುರುಸ್ವಾಮಿ ಮಾರ್ಲ ಗೌರವ ಉಪಸ್ಥಿತಿ ವಹಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ. ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ವಿವಿಧ ಭಜನಾ ತಂಡಗಳಿಂದ ಭಜನೋತ್ಸವ ನಡೆಯಲಿದೆ.

ಸಂಜೆ 4 ಗಂಟೆಗೆ ಸತ್ಯನಾರಾಯಣ ಪೂಜೆ ನಡೆದು ಅನ್ನಸಂತರ್ಪಣೆ ನಡೆಯಲಿದೆ. ನಂತರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

vtv vitla
vtv vitla
- Advertisement -

Related news

error: Content is protected !!