Friday, April 19, 2024
spot_imgspot_img
spot_imgspot_img

ಜಯ ಸಿ. ಸುವರ್ಣ ನಿಧನಕ್ಕೆ ಕುದ್ರೋಳಿ ಕ್ಷೇತ್ರದಿಂದ ಸಂತಾಪ

- Advertisement -G L Acharya panikkar
- Advertisement -

ಮಂಗಳೂರು: ಬಿಲ್ಲವರ ಮಹಾಮಂಡಲದ ಸ್ಥಾಪಕಾಧ್ಯಕ್ಷ , ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಜಯ ಸಿ. ಸುವರ್ಣ ನಿಧನಕ್ಕೆ ಕುದ್ರೋಳಿ ಕ್ಷೇತ್ರಾಡಳಿತ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಬುಧವಾರ ಸಂತಾಪ ಸೂಚಕ ಸಭೆ ನಡೆಸಲಾಯಿತು.

ಕ್ಷೇತ್ರದ ಅಧ್ಯಕ್ಷ ಎಚ್.ಎಸ್ ಸಾಯಿರಾಂ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಂಬೈಯಲ್ಲಿ ಬಿಲ್ಲವರಿಗೆ ಸ್ಫೂರ್ತಿಯಾಗಿ, ಸಮಸ್ತ ಬಿಲ್ಲವ ಸಮಾಜವನ್ನು ಒಂದಾಗಿಸಿ, ಬಿಲ್ಲವ ಸಂಘಟನೆಗಳಿಗೆ ಶಕ್ತಿಯಾಗಿ, ಬ್ರಹ್ಮಶ್ರೀ ನಾರಾಯಣಗುರುಗಳ ತತ್ವ ಚಿಂತನೆಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಬಿಲ್ಲವ ಸಮಾಜದ ಅಭಿವೃದ್ಧಿಗೆ ಜಯ ಸಿ. ಸುವರ್ಣರು ಹತ್ತು ಹಲವಾರು ಕೊಡುಗೆಗಳನ್ನು ಸ್ಮರಿಸಲಾಯಿತು.

ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿಯವರ ಕುದ್ರೋಳಿ ಕ್ಷೇತ್ರದ ನವೀಕರಣದ ಕನಸ್ಸಿಗೆ ಬೆಂಬಲವಾಗಿ ನಿಂತು ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆ, ಭಾರತ್ ಕೋ- ಅಪರೇಟಿವ್ ಬ್ಯಾಂಕಿನ ಚುಕ್ಕಾಣಿ ಹಿಡಿದು ಸಮಾಜದ ಸಾವಿರಾರು ಮಂದಿಗೆ ಉದ್ಯೋಗ, ಲಕ್ಷಾಂತರ ಮಂದಿಗೆ ಸಾಲದ ಮೂಲಕ ಆರ್ಥಿಕ ಶಕ್ತಿ ನೀಡಿ ಅವರ ವ್ಯವಹಾರಕ್ಕೆ ನೆರವಾದ ಜಯ ಸಿ ಸುವರ್ಣರ ಸಾಧನೆಯನ್ನು ಗುಣಗಾನ ಮಾಡಲಾಯಿತು.

ಕ್ಷೇತ್ರದ ಉಪಾಧ್ಯಕ್ಷ ರಾಘವೇಂದ್ರ ಕೂಳೂರು, ಕಾರ್ಯದರ್ಶಿ ಬಿ.ಮಾಧವ ಸುವರ್ಣ, ಕೋಶಾಧಿಕಾರಿ ಪದ್ಮರಾಜ್ ಆರ್, ಟ್ರಸ್ಟಿಗಳಾದ ಬಿ.ಕೆ.ತಾರಾನಾಥ್, ರವಿಶಂಕರ ಮಿಜಾರ್, ಕೆ.ಮಹೇಶ್ಚಂದ್ರ, ಕ್ಷೇತ್ರಾಡಳಿತ ಮಂಡಳಿ ಸದಸ್ಯರಾದ ಹರಿಕೃಷ್ಣ ಬಂಟ್ವಾಳ್, ದೇವೇಂದ್ರ ಪೂಜಾರಿ, ಶೇಖರ್ ಪೂಜಾರಿ, ಡಾ.ಬಿ.ಜಿ.ಸುವರ್ಣ, ಕ್ಷೇತ್ರದ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಊರ್ಮಿಳಾ ರಮೇಶ್, ಎಂ.ವೇದಕುಮಾರ್, ದೇವೇಂದ್ರ ಪೂಜಾರಿ, ವಿಶ್ವನಾಥ್ ಕಾಸರಗೋಡು, ಎಸ್.ಜಯ ವಿಕ್ರಂ, ರಾಧಾಕೃಷ್ಣ, ಜೆ.ಶಂಕರ್, ಡಿ.ಡಿ.ಕಟ್ಟೆಮಾರ್, ಅನುಸೂಯ ಬಿ.ಟಿ.ಸಾಲ್ಯಾನ್, ಕೆ.ಚಿತ್ತರಂಜನ್ ಗರೋಡಿ, ಹರೀಶ್ ಕುಮಾರ್, ಜತಿನ್ ಅತ್ತಾವರ, ದೂಮಪ್ಪ ಮೇಸ್ತ್ರಿ, ಎನ್.ಹರಿಶ್ಚಂದ್ರ, ರಮಾನಾಥ್ ಕಾರಂದೂರು, ಕ್ಷೇತ್ರದ ಮ್ಯಾನೇಜರ್ ವಿನೀತ್ ಮೊದಲಾದವರು ಉಪಸ್ಥಿತರಿದ್ದರು.

- Advertisement -

Related news

error: Content is protected !!