Friday, June 5, 2026
spot_imgspot_img
spot_imgspot_img

ಪುತ್ತೂರು: ಜಯಕರ್ನಾಟಕ ಜನಪರ ವೇದಿಕೆಯ ಮೂರನೇ ವರ್ಷದ ವಾರ್ಷಿಕೋತ್ಸವ ಮತ್ತು ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಕಾರ್ಯ

- Advertisement -
- Advertisement -

ಪುತ್ತೂರು: ಜಯಕರ್ನಾಟಕ ಜನಪರ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಬಿ.ಗುಣರಂಜನ್ ಶೆಟ್ಟಿ ಯವರ ಮಾರ್ಗದರ್ಶನದಲ್ಲಿ ಸಾಮಾಜಿಕ ಕಳಕಳಿಯುಳ್ಳ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ಸಂಘಟನೆಯ ಮೂರನೇ ವರ್ಷದ ವಾರ್ಷಿಕೋತ್ಸವ ಮತ್ತು ಗಾಂಧಿ ಜಯಂತಿಯನ್ನು ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ಮಾರಿಯಮ್ಮ ದೇವಸ್ಥಾನದ ಮುಂಭಾಗದಲ್ಲಿ ಸ್ವಚ್ಛತಾ ಕಾರ್ಯ ಮಾಡುವುದರ ಮೂಲಕ ಆಚರಿಸಲಾಯಿತು.

ಜಯಕರ್ನಾಟಕ ಜನಪರ ವೇದಿಕೆಯ ರಾಜ್ಯ ಕಾರ್ಯದರ್ಶಿ ಪ್ರವೀಣ್ ಶೆಟ್ಟಿ ತಿಂಗಳಾಡಿ , ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಕಾರ್ತಿಕ್ ರೈ ಮತ್ತು ಪದಾಧಿಕಾರಿಗಳು ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಕಳೆದ ವರ್ಷ ಜಯಕರ್ನಾಟಕ ಜನಪರ ವೇದಿಕೆಯ ವಾರ್ಷಿಕೋತ್ಸವ ಮತ್ತು ಗಾಂಧಿ ಜಯಂತಿ ಪ್ರಯುಕ್ತ”ಮನೆಗೊಂದು ಮರ ಊರಿಗೊಂದು ಕೆರೆ” “ಜಯ ಕರ್ನಾಟಕ ಜನಪರ ವೇದಿಕೆಯ ನಡೆ ನಿಸರ್ಗದ ಕಡೆ” ಎಂಬ ಅಭಿಯಾನದಡಿಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆ, ತಾಲ್ಲೂಕು ಹಾಗೂ ವಿಧಾನಸಭಾ ಕ್ಷೇತ್ರಗಳಲ್ಲಿ ವಿವಿಧ ಬಗೆಯ ಗಿಡಗಳನ್ನು ನೆಡುವ ಮುಖಾಂತರ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.

- Advertisement -

Related news

error: Content is protected !!