Friday, May 10, 2024
spot_imgspot_img
spot_imgspot_img

NDA ಜೊತೆ JDS ಮೈತ್ರಿ

- Advertisement -G L Acharya panikkar
- Advertisement -

ನವದೆಹಲಿ : ದೇಶದ ನೆಚ್ಚಿನ ಪ್ರಧಾನಿ ನರೇಂದ್ರ ಮೋದೀಜಿ ಅವರ ನಾಯಕತ್ವ ವನ್ನು ಒಪ್ಪಿಕೊಂಡು ಬಿಜೆಪಿ ನೇತೃತ್ವದಲ್ಲಿ NDA ಮೈತ್ರಿಕೂಟಕ್ಕೆ ಸೇರ್ಪಡೆಯಾದ ಜೆಡಿಎಸ್‌ ಪಕ್ಷದ ಎಲ್ಲಾ ಮುಖಂಡರಿಗೆ ಹಾರ್ದಿಕ ಸ್ವಾಗತ.

ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರು ಭೇಟಿ ಮಾಡಿದ ಬಳಿಕ ಟ್ವೀಟ್‌ ಮಾಡಿರುವ ನಡ್ಡಾ, ಜೆಡಿಎಸ್ ಎನ್ ಡಿಎ ಮೈತ್ರಿಕೂಟದ ಭಾಗವಾಗಲು ನಿರ್ಧರಿಸಿರುವುದು ನನಗೆ ಖುಷಿ ತಂದಿದೆ. ನಾವು ಅವರನ್ನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇವೆʼʼ ಎಂದು ಹೇಳಿದ್ದಾರೆ

ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿ ಕೂಟಕ್ಕೆ ಜೆಡಿಎಸ್‌ ಸೇರ್ಪಡೆಯಾಗಿರುವುದು ನನಗೆ ಖುಷಿ ತಂದಿದೆ. ಜೆಡಿಎಸ್‌ ಬೆಂಬಲದಿಂದ ಎನ್‌ಡಿಎ ಮೈತ್ರಿಕೂಟದ ಶಕ್ತಿ ಮತ್ತಷ್ಟು ವೃದ್ದಿಸಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ನವ ಭಾರತದ ಕನಸನ್ನು ಸಾಕಾರಗೊಳಿಸುವಲ್ಲಿ ಮತ್ತಷ್ಟು ಶಕ್ತಿ ತುಂಬಲಿದೆ ಎಂದರು.

ಬಿಜೆಪಿ ಮತ್ತು ಜೆಡಿಎಸ್ ನಡುವಿನ ಈ ಮೈತ್ರಿಯಿಂದ ರಾಜ್ಯದಲ್ಲಿ ಬಿಜೆಪಿ ಗರಿಷ್ಠ ಸ್ಥಾನಗಳನ್ನು ಗೆಲ್ಲಲಿದೆ. ವಿಶ್ವವಂದ್ಯ ನಾಯಕ ಹಾಗೂ ಪ್ರಧಾನಿ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಮಂತ್ರಿ ಆಗುವುದು ನಿಶ್ಚಿತ ಎಂಬುದರ ಸಂಕೇತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ಸ್ವಾಗತಿಸಿದ್ದಾರೆ.

- Advertisement -

Related news

error: Content is protected !!