- Advertisement -
- Advertisement -

ಕಲಬುರಗಿ: ಜೀಪ್ ಹಾಗೂ ಬಸ್ ಗಳ ಮಧ್ಯೆ ನಡೆದ ಸರಣಿ ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದು, ಮೂವರು ಗಂಭೀರ ಗಾಯಗೊಂಡಿರುವ ಘಟನೆ ಕಲಬುರಗಿಯಿಂದ ಅಫಜಲ್ಪುರ ಮಧ್ಯೆ ಇರುವ ಹಡಗಿಲ್ ಹಾರುತಿ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ನಡೆದಿದೆ.

ಮೃತರನ್ನು ಅಫಜಲಪುರ ತಾಲೂಕಿನ ಮೂಲದವರೆಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.


ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


- Advertisement -








