


ಜಾರ್ಖಂಡ್: ದೆಹಲಿಗೆ ರೋಗಿಯನ್ನು ಹೊತ್ತೊಯ್ಯುತ್ತಿದ್ದ ಏರ್ ಆಂಬ್ಯುಲೆನ್ಸ್ ವಿಮಾನವೊಂದು ಸೋಮವಾರ ರಾತ್ರಿ ಭೀಕರ ಅಪಘಾತಕ್ಕೀಡಾಗಿದ್ದು, ವಿಮಾನದಲ್ಲಿದ್ದ ಎಲ್ಲಾ ಏಳು ಮಂದಿ ಸಾವನ್ನಪ್ಪಿರುವ ಘಟನೆ ಜಾರ್ಖಂಡ್ನ ಛತ್ರ ಜಿಲ್ಲೆಯಲ್ಲಿ ಸೋಮವಾರ ಸಂಜೆ ನಡೆದಿದೆ.
ರೆಡ್ ಬರ್ಡ್ ಏರ್ವೇಸ್ ಪ್ರೈವೇಟ್ ಲಿಮಿಟೆಡ್ ನಿರ್ವಹಿಸುತ್ತಿದ್ದ ಬೀಚ್ಕ್ರಾಫ್ಟ್ ಸಿ90 (ವಿಐ-ಎಜೆವಿ) ರಾಂಚಿ ವಿಮಾನ ನಿಲ್ದಾಣದಿಂದ ರಾತ್ರಿ 7.11ಕ್ಕೆ ಟೇಕಾಫ್ ಆಗಿತ್ತು. 7.30ರ ವೇಳೆಗೆ ಸಂಪರ್ಕ ಕಡಿದುಕೊಂಡು ನಾಪತ್ತೆಯಾಗಿದ್ದ ವಿಮಾನ ಸಿಮಾರಿಯಾ ಬಳಿಯ ಬರಿಯಾಟ್ ಪಂಚಾಯ್ತಿ ಪ್ರದೇಶದಲ್ಲಿ ದಟ್ಟ ಕಾಡಿನ ಒಳಗೆ ಅಪಘಾತಕ್ಕೀಡಾಗಿತ್ತು.
ಮೃತಪಟ್ಟ ಎಲ್ಲ ಏಳು ಮಂದಿಯ ಮೃತದೇಹಗಳನ್ನು ಪತ್ತೆ ಮಾಡಲಾಗಿದ್ದು, ಅವರನ್ನು, ಕ್ಯಾಪ್ಟನ್ ವಿವೇಕ್ ವಿಕಾಸ್ ಭಗತ್, ಕ್ಯಾಪ್ಟನ್ ಸೌರಜ್ದೀಪ್ ಸಿಂಗ್, ಸಂಜಯ್ ಕುಮಾರ್, ಡಾ.ವಿಕಾಸ್ ಕುಮಾರ್ ಗುಪ್ತಾ, ಸಚಿನ್ ಕುಮಾರ್ ಮಿಶ್ರಾ, ಅರ್ಚನಾ ದೇವಿ ಮತ್ತು ಧುರು ಕುಮಾರ್ ಎಂದು ಎಸ್ಡಿಪಿಓ ಶುಭಂ ಖಂಡೇವಾಲ್ ತಿಳಿಸಿದ್ದಾರೆ.
ಪ್ರತಿಕೂಲ ಹವಾಮಾನ ದುರಂತಕ್ಕೆ ಕಾರಣವಾಗಿರಬಹುದು ಎಂದು ತಿಳಿದುಬಂದಿದೆ.








