- Advertisement -
- Advertisement -
ಪುತ್ತೂರು: ಜೋಳದ ಲೋಡ್‌ನಲ್ಲಿ ಸುಮಾರು 1.5 ಕ್ವಿಂಟಾಲ್‌ನಷ್ಟು ಭಾರೀ ಪ್ರಮಾಣದ ಗಾಂಜಾ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪುತ್ತೂರು ನಗರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ತಿಮ್ಮಪ್ಪ ನಾಯ್ಕ್ ನೇತೃತ್ವದಲ್ಲಿ ಪೊಲೀಸರು ಪತ್ತೆ ಮಾಡಿದ್ದಾರೆ.
ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪಾಟ್ರಕೋಡಿ ಸಮೀಪ ಈ ಕಾರ್ಯಾಚರಣೆ ನಡೆದಿದೆ. ಪುತ್ತೂರಿನಲ್ಲಿ ಇದೇ ಮೊದಲು ಇಷ್ಟೊಂದು ಪ್ರಮಾಣದಲ್ಲಿ ಗಾಂಜಾ ಸಾಗಾಟ ಪತ್ತೆಯಾಗಿರುವುದು.ಪ್ರಕರಣದಲ್ಲಿ ಜೀಪು ಚಾಲಕ, ಕಾರು ಚಾಲಕ ಸೇರಿದಂತೆ ಒಟ್ಟು ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದು ಬಂದಿದೆ.
- Advertisement -