Saturday, May 11, 2024
spot_imgspot_img
spot_imgspot_img

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ಪತ್ರಕರ್ತ ಕೆ.ವಿ.ಪ್ರಭಾಕರ್ ನೇಮಕ

- Advertisement -G L Acharya panikkar
- Advertisement -
vtv vitla

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರರಾಗಿ ಹಿರಿಯ ಪತ್ರಕರ್ತ ಕೆ.ವಿ. ಪ್ರಭಾಕರ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ. ಕಳೆದ 10 ವರ್ಷಗಳಿಂದ ಇವರು ಸಿದ್ಧರಾಮಯ್ಯ ಅವರ ಜೊತೆಗಿದ್ದಾರೆ.

ಈ ಹಿಂದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮುಖ್ಯಮಂತ್ರಿಯವರ ಮಾಧ್ಯಮ ಸಮನ್ವಯಕರಾಗಿದ್ದ ಕೆ ವಿ ಪ್ರಭಾಕರ್ ಅವರನ್ನು ಈ ಬಾರಿ ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿದೆ.

ಕೆ.ವಿ. ಪ್ರಭಾಕರ್ ಅವರಿಗೆ ಸಂಪುಟ ದರ್ಜೆ ಸಚಿವರ ಸ್ಥಾನಮಾನವನ್ನೂ ಸಹ ನೀಡಲಾಗಿದ್ದು, ಸಚಿವರಿಗೆ ಸಿಗುವ ಎಲ್ಲ ಸೌಲಭ್ಯಗಳು ಅವರಿಗೆ ಸಿಗಲಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿ ಟಿವಿ ಸುನಂದಮ್ಮ ಅವರು ಆದೇಶ ಹೊರಡಿಸಿದ್ದಾರೆ.

- Advertisement -

Related news

error: Content is protected !!