Sunday, July 26, 2026
spot_imgspot_img
spot_imgspot_img

ಜೂನ್ 28ರೊಳಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ಪಿಯು ಬೋರ್ಡ್

- Advertisement -
- Advertisement -
vtv vitla

ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆಯ ಫಲಿತಾಂಶವನ್ನು ಜೂನ್ 24 ರಿಂದ 28ರೊಳಗೆ ಪ್ರಕಟಿಸುವುದಾಗಿ ಪಿಯು ಬೋರ್ಡ್ ತಿಳಿಸಿದೆ.

ಈಗಾಗಲೇ ಜೂನ್ 3ನೇ ವಾರದಲ್ಲಿ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟಿಸೋದಾಗಿ ಪದವಿ ಪೂರ್ವ ಶಿಕ್ಷಣ ಮಂಡಳಿ ತಿಳಿಸಿತ್ತು. ಆದರೆ ಮೌಲ್ಯಮಾಪನ ಪೂರ್ಣಗೊಳ್ಳದ ಕಾರಣ ಇನ್ನೂ ವಿಳಂಬವಾಗಲಿದೆ ಎನ್ನಲಾಗಿದೆ. ಜೂನ್ 28ರೊಳಗೆ ಫಲಿತಾಂಶ ಪ್ರಕಟಿಸೋದಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ರಾಮಚಂದ್ರನ್ ತಿಳಿಸಿದ್ದಾರೆ.

ಜೂನ್ 3ನೇ ವಾರದಲ್ಲೇ ಫಲಿತಾಂಶ ನೀಡುವ ಪ್ರಯತ್ನ ಮಾಡುತ್ತಿದ್ದೇವೆ. ನಿರೀಕ್ಷೆಯಂತೆ ಮೌಲ್ಯಮಾಪನ ಕಾರ್ಯವೂ ಈಗ ನಡೆಯುತ್ತಿದೆ. ಮೌಲ್ಯಮಾಪನ ತಡವಾದರೆ ಮಾತ್ರ ಜೂನ್ 4ನೇ ವಾರದಲ್ಲಿ ದ್ವಿತೀಯ ಪಿಯು ಫಲಿತಾಂಶ ಪ್ರಕಟಿಸುವುದಾಗಿ ಸ್ಪಷ್ಟ ಪಡಿಸಿದ್ದಾರೆ.

vtv vitla
- Advertisement -

Related news

error: Content is protected !!