Saturday, June 13, 2026
spot_imgspot_img
spot_imgspot_img

ಕಡಬ: ಬಲ್ಯ ಗ್ರಾಮದ ಕೆರೆನಡ್ಕ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ.

- Advertisement -
- Advertisement -

ಕಡಬ:- ಕಡಬ ತಾಲೂಕು ಬಲ್ಯ ಗ್ರಾಮದ ಕೆರೆನಡ್ಕ ದರ್ಣಪ್ಪ‌ ಗೌಡ ಎಂಬುವರ ಮನೆಯಲ್ಲಿ ಗುರುವಾರ ರಾತ್ರಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಅಪಾರ ನಷ್ಟ ಸಂಭವಿಸಿದೆ.

ಘಟನೆಯಿಂದ ಮನೆಯ ಛಾವಣಿ ಭಾಗಶಃ ಹಾನಿಯಾಗಿದೆ. ಗೋಡೆ ಬಿರುಕು ಬಿಟ್ಟಿದೆ. ಕೋಣೆಯಲ್ಲಿದ್ದ ವಸ್ತುಗಳಿಗೂ ಹಾನಿಯಾಗಿದೆ. ಮನೆ ಮಂದಿ ಅಪಾಯದಿಂದ ಪಾರಾಗಿದ್ದಾರೆ. ವಿಷಯ ತಿಳಿದ ಗ್ಯಾಸ್ ಏಜೆನ್ಸಿಯವರು ಸ್ಥಳಕ್ಕೆ ಧಾವಿಸಿ, ಹೊಸ ಗ್ಯಾಸ್ ಕನೆಕ್ಷನ್ ನೀಡಿದ್ದಾರೆ. ಅಲ್ಲದೇ ಸ್ಥಳ ಸಮೀಕ್ಷೆ ನಡೆಸಿ ಪರಿಹಾರ ಕೊಡುವ ಭರವಸೆ ನೀಡಿದ್ದಾರೆ.

- Advertisement -

Related news

error: Content is protected !!