Saturday, June 6, 2026
spot_imgspot_img
spot_imgspot_img

ಕಡಬ: ನಿಯಂತ್ರಣ ತಪ್ಪಿ ಮೋರಿಗೆ ಢಿಕ್ಕಿ ಹೊಡೆದ ಬೈಕ್; ವಿದ್ಯಾರ್ಥಿ ಮೃತ್ಯು..!

- Advertisement -
- Advertisement -

ಕಡಬ: ವಿದ್ಯಾರ್ಥಿಯೋರ್ವ ಚಲಾಯಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಮೋರಿಗೆ ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಮೃತಪಟ್ಟ ಘಟನೆ ಶುಕ್ರವಾರ ಬೆಳಿಗ್ಗೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ರೆಂಜಿಲಾಡಿ ಗ್ರಾಮದ ಪೇರಡ್ಕ ಸಮೀಪ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಪೇರಡ್ಕದ ಖಾಸಗಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ನೂಜಿಬಾಳ್ತಿಲ ಗ್ರಾಮದ ಹೊಸಮನೆ ಕಾನ ನಿವಾಸಿ ವಿಶ್ವನಾಥ್ ಎಂಬವರ ಪುತ್ರ ಆಶೀಶ್‌ (16) ಎಂದು ಗುರುತಿಸಲಾಗಿದೆ.

ಮನೆಯಿಂದ ಶಾಲೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಬಾಲಕನನ್ನು ಕಡಬದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಗಂಭೀರ ಗಾಯಗೊಂಡಿದ್ದ ಬಾಲಕ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

- Advertisement -

Related news

error: Content is protected !!