Monday, June 22, 2026
spot_imgspot_img
spot_imgspot_img

ಕಡಬ: ನಾಪತ್ತೆಯಾಗಿದ್ದ ಆಂಬ್ಯುಲೆನ್ಸ್ ಚಾಲಕನ ಮೃತದೇಹ ಪತ್ತೆ..!

- Advertisement -
- Advertisement -

ಕಡಬ: ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ಸುಬ್ರಹ್ಮಣ್ಯ ಆಸ್ಪತ್ರೆಯ ಆಂಬ್ಯುಲೆನ್ಸ್ ಚಾಲಕನ ಮೃತದೇಹ ಕುಮಾರಧಾರ ನದಿಯಲ್ಲಿ ಜುಲೈ 25ರಂದು ಪತ್ತೆಯಾಗಿದೆ.

ಮೃತಪಟ್ಟ ವ್ಯಕ್ತಿಯನ್ನು ಸುಬ್ರಹ್ಮಣ್ಯ ದೇವರಗದ್ದೆ ನಿವಾಸಿ ಹೊನ್ನಪ್ಪ (52) ಎಂದು ಗುರುತಿಸಲಾಗಿದೆ.

ಹೊನ್ನಪ್ಪ ಅವರು ಜುಲೈ 22ರ ಬೆಳಗ್ಗೆ ಕರ್ತವ್ಯಕ್ಕೆಂದು ಮನೆಯಿಂದ ಹೊರಟವರು ಬಳಿಕ ನಾಪತ್ತೆಯಾಗಿದ್ದರು. ಅಗ್ರಹಾರ ದೇವಸ್ಥಾನದ ಬಳಿಯಿಂದಾಗಿ ಕುಮಾರಧಾರ ನದಿಯ ಕಡೆಗೆ ಹೋಗುತ್ತಿರುವುದು ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಕಂಡುಬಂದಿತ್ತು. ಈ ಹಿನ್ನೆಲೆ ಅವರು ನದಿಗೆ ಹಾರಿರಬಹುದು ಎಂಬ ಶಂಕೆ ಮೇರೆಗೆ ಕುಮಾರಧಾರ ನದಿಯಲ್ಲಿ ಅಂದು ರಾತ್ರಿಯಿಂದಲೇ ಶೋಧ ಕಾರ್ಯ ಆರಂಭಿಸಲಾಗಿತ್ತು.

ಜು.23ರಂದು ಎಸ್.ಡಿ.ಆರ್.ಎಫ್. ತಂಡ, ಈಶ್ವರ್ ಮಲ್ಪೆ ತಂಡ, ಆಂಬ್ಯುಲೆನ್ಸ್ ಚಾಲಕರ ತಂಡ, ರವಿ ಕಕ್ಕೆಪದವು ತಂಡ, ಅಗ್ನಿಶಾಮಕದಳ ಸುಳ್ಯ, ಸ್ಥಳೀಯರು ಶೋಧ ಕಾರ್ಯಾಚರಣೆ ನಡೆಸಿದ್ದರು. ಇದೀಗ 4 ದಿನಗಳ ನಿರಂತರ ಕಾರ್ಯಾಚರಣೆ ಬಳಿಕ ಶುಕ್ರವಾರ, ಕುಮಾರಧಾರ ಸ್ನಾನಘಟ್ಟದಿಂದ ಸುಮಾರು ಕಿ.ಮೀ. ಕೆಳಭಾಗದಲ್ಲಿ ಹೊನ್ನಪ್ಪ ಅವರ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!