Friday, May 17, 2024
spot_imgspot_img
spot_imgspot_img

ಕಡಬ: ಸೇತುವೆಯಿಂದ ನದಿಗೆ ಕಾರು ಬಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್..! ವಿಟ್ಲದ ಮೂಲದ ಯುವಕ ನಾಪತ್ತೆ; ಮೊಬೈಲ್ ಸ್ವಿಚ್ ಆಫ್‌

- Advertisement -G L Acharya panikkar
- Advertisement -

ಕಡಬ: ಕಾಣಿಯೂರು ಸಮೀಪದ ಬೈತಡ್ಕ ಎಂಬಲ್ಲಿ ಕಾರೊಂದು ಸೇತುವೆಯಿಂದ ಕೆಳಗೆ ಬಿದ್ದು ನೀರು ಪಾಲಾದ ಘಟನೆಗೆ ತಿರುವು ಸಿಕ್ಕಿದೆ. ವಿಟ್ಲದ ಕುಂಡಡ್ಕ ಹಲಸಿನ ಕಟ್ಟೆ ನಿವಾಸಿ ಧನುಷ್ ಎಂಬವರಿಗೆ ಸೇರಿದ ಕಾರು ಎಂಬ ಮಾಹಿತಿ ಲಭ್ಯವಾಗಿದೆ.

ಮೂಲಗಳ ಪ್ರಕಾರ ಧನುಷ್ ನಾಪತ್ತೆಯಾಗಿದ್ದು ಮೊಬೈಲ್ ಸಹ ಸ್ವಿಚ್ ಆಫ್ ಆಗಿದೆ. ಇದರಿಂದ ಕುಟುಂಬಸ್ಥರಲ್ಲಿ ಆತಂಕ ಇಮ್ಮಡಿಯಾಗಿದೆ. ಕಾರಿನಲ್ಲಿ ಒಟ್ಟು 2 ಮಂದಿ ಪ್ರಯಾಣಿಸುತ್ತಿದ್ದರು. ಅವರು ಸಹ ದುರಂತದಲ್ಲಿ ಸಿಲುಕಿ ನಾಪತ್ತೆಯಾಗಿದ್ದಾರೆ.

ಹೊಳೆಯಲ್ಲಿ ಭಾರೀ ಪ್ರಮಾಣದ ನೀರು ಹರಿಯುತ್ತಿರುವ ಹಿನ್ನೆಲೆ ಕಾರು ನೀರಿನಲ್ಲಿ ಕೊಚ್ಚಿ ಕೊಂಡುಹೋಗಿದ್ದು, ಬಿದ್ದ ಜಾಗದಿಂದ 100 ಮೀ. ದೂರದಲ್ಲಿ ಕಾರು ಪತ್ತೆಯಾಗಿತ್ತು. ಆದರೇ ಅದನ್ನು ಮೇಲಕ್ಕೆತ್ತುವ ಪ್ರಯತ್ನ ಮಾಡಿದಾಗ ನೀರು ಹರಿಯುವ ರಭಸಕ್ಕೆ ಕಾರು ಮತ್ತೆ ನೀರಿನಲ್ಲಿ ಕೊಚ್ಚಿ ಹೋಗಿದ್ದು, ಇದೀಗ ಮತ್ತೆ ಹರಸಾಹಸ ಪಟ್ಟು ಅಗ್ನಿ ಶಾಮಕ ದಳದ ಸಿಬ್ಬಂದಿ ಕಾರನ್ನು ಮೇಲಕ್ಕೆತ್ತಿದ್ದರೆ.

ಸಿಸಿಟಿವಿಯಲ್ಲಿ ದೃಶ್ಯ ಸೆರೆ..!
ಬೈತಡ್ಕ ಮಸೀದಿಯ ಸಮೀಪವೇ ಇರುವ ಸೇತುವೆಗೆ ಕಾರೊಂದು ಢಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಕ್ಕೆ ಬಿದ್ದಿದೆ. ಈ ಘಟನೆ ಬೈತಡ್ಕ ಮಸೀದಿಯ ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆಯಾಗಿದೆ. ಘಟನೆ ಕುರಿತಂತೆ ರಕ್ಷಣಾ ದಳ ಹಾಗೂ ಸ್ಥಳೀಯರು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.

- Advertisement -

Related news

error: Content is protected !!