Thursday, October 1, 2026
spot_imgspot_img
spot_imgspot_img

ಕಡಬ: ಸಾಕು ನಾಯಿಯನ್ನು ಅಟ್ಟಿಸಿಕೊಂಡು ಬಂದ ಚಿರತೆ ಶೌಚಾಲಯದಲ್ಲಿ ಬಂಧಿ!

- Advertisement -
- Advertisement -

ಕಡಬ: ಸಾಕು ನಾಯಿಯನ್ನು ಅಟ್ಟಿಸಿಕೊಂಡು ಬಂದ ಚಿರತೆಯೊಂದು ಸಾಕು ನಾಯಿಯ ಜೊತೆ ಮನೆಯ ಶೌಚಾಲಯದಲ್ಲಿ ಬಂಧಿಯಾದ ಘಟನೆ ಕಡಬದ ಕೈಕಂಬದಲ್ಲಿ ನಡೆದಿದೆ.

ಸುಬ್ರಹ್ಮಣ್ಯ ಸಮೀಪದ ಕೈಕಂಬ ನಿವಾಸಿ ರೇಗಪ್ಪ ಎಂಬವರ ಮನೆಯ ಸಮೀಪ ಸಾಕು ನಾಯಿಯನ್ನು ಚಿರತೆಯೊಂದು ಅಟ್ಟಿಸಿಕೊಂಡು ಬಂದಿದೆ. ಚಿರತೆಯಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಸಾಕುನಾಯಿಯು ಮನೆಯ ಹೊರಗಿದ್ದ ಶೌಚಾಲಯವನ್ನು ಹೊಕ್ಕಿದ್ದು, ಚಿರತೆಯು ನಾಯಿಯನ್ನು ಹಿಂಬಾಲಿಸಿ ಶೌಚಾಲಯದ ಒಳಗೆ ಬಂದಿದೆ.

ಇದನ್ನು ಗಮನಿಸಿದ ಮನೆಯವರು ಹೊರಗಿನಿಂದ ಶೌಚಾಲಯದ ಬಾಗಿಲನ್ನು ಹಾಕಿದ್ದು, ಇದೀಗ ನಾಯಿ ಮತ್ತು ಚಿರತೆ ಎರಡೂ ಶೌಚಾಲಯದ ಒಳಗೆ ಬಂಧಿಯಾಗಿದೆ. ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದು, ಇನ್ನಷ್ಟೇ ಕಾರ್ಯಾಚರಣೆ ನಡೆಯಬೇಕಿದೆ.

- Advertisement -

Related news

error: Content is protected !!