Thursday, April 25, 2024
spot_imgspot_img
spot_imgspot_img

ಕಡಬ: ಕಾಲೇಜಿಗೆ ಹೋಗುತ್ತೇನೆಂದು ತೆರಳಿದ ಯುವತಿ ನಾಪತ್ತೆ; ಸ್ಥಳೀಯ ಯುವಕನ ಜೊತೆ ಪರಾರಿಯಾಗಿರುವ ಶಂಕೆ..?!

- Advertisement -G L Acharya panikkar
- Advertisement -

ಕಡಬ: ತಂದೆ-ತಾಯಿ ವಿದ್ಯಾಭ್ಯಾಸಕ್ಕೆಂದು ಮೊಬೈಲ್ ತೆಗೆದು ಕೊಟ್ಟಿದ್ದರು. ಆದರೆ ಕಾಲೇಜು ವಿದ್ಯಾರ್ಥಿನಿ ನಾಪತ್ತೆಯಾಗಿದ್ದಾಳೆ. ಸ್ಥಳೀಯ ಯುವಕನೊಂದಿಗೆ ನಾಪತ್ತೆಯಾಗಿದ್ದಾಳೆ ಎಂಬ ಶಂಕೆ ವ್ಯಕ್ತವಾಗಿದೆ..!

ಮೊಬೈಲ್ ಮೂಲಕ ಹುಟ್ಟಿಕೊಂಡ ಪ್ರೀತಿಯಿಂದ ಅಪ್ರಾಪ್ತೆ ಕಾಲೇಜು ವಿದ್ಯಾರ್ಥಿನಿ ಒಬ್ಬಳು ಸ್ಥಳೀಯ ಯುವಕನ ಜೊತೆ ನಾಪತ್ತೆಯಾಗಿರುವ ಘಟನೆ ಕಡಬ ಸಮೀಪದ ಕಳಾರದಿಂದ ವರದಿಯಾಗಿದೆ.

ಕಳಾರ ನಿವಾಸಿ ಹದಿನೇಳು ವರ್ಷದ ಯುವತಿಯು ಗುರುವಾರದಂದು ಕಾಲೇಜಿಗೆಂದು ಮನೆಯಿಂದ ತೆರಳಿದ್ದು, ಸಂಜೆಯವರೆಗೂ ಮನೆಗೆ ಬಾರದೆ ನಾಪತ್ತೆಯಾಗಿದ್ದಾಳೆ. ಸಂಬಂಧಿಕರ ಮನೆಯಲ್ಲೆಲ್ಲಾ ಹುಡಿಕಾಡಿದ ಆಕೆಯ ಮನೆಯವರು ಯಾವುದೇ ಸುಳಿವು ಸಿಗದ ಹಿನ್ನೆಲೆಯಲ್ಲಿ ಇಂದು ಕಡಬ ಠಾಣೆಗೆ ದೂರು ನೀಡಿದ್ದಾರೆ.

ಇದೇ ವೇಳೆ ಸ್ಥಳೀಯ ನಿವಾಸಿ 24 ವರ್ಷದ ಹನೀಫ್ ಎಂಬಾತ ನಾಪತ್ತೆಯಾಗಿದ್ದು, ಇಬ್ಬರೂ ಜೊತೆಯಾಗಿ ತೆರಳಿರುವ ಸಂಶಯ ವ್ಯಕ್ತವಾಗಿದೆ. ಇದೀಗ ನಾಪತ್ತೆಯಾದವರ ಪತ್ತೆಗೆ ಕಡಬ ಪೊಲೀಸರು ಬಲೆ ಬೀಸಿದ್ದಾರೆ. ಆನ್‌ಲೈನ್ ತರಗತಿಯ ನೆಪದಲ್ಲಿ ಮೊಬೈಲ್ ಅವಾಂತರದಿಂದ ಇವರು ಜೊತೆಯಾಗಿ ತೆರಳಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ.

- Advertisement -

Related news

error: Content is protected !!