- Advertisement -
- Advertisement -
ಕಡಬ :-ಕಡಬಕ್ಕೆ ಮತ್ತೆ ಕೊರೋನಾ ಆಘಾತ ಉಂಟಾಗಿದ್ದು, ಸುಳ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೊರೋನಾ ವಾರಿಯರ್ ಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.ಕಡಬ ತಾಲೂಕಿನ 102 ನೆಕ್ಕಿಲಾಡಿ ಗ್ರಾಮದ ಕೊರೋನಾ ವಾರಿಯರ್, ಸುಳ್ಯದಲ್ಲಿ ಕರ್ತವ್ಯದಲ್ಲಿದ್ದ ನರ್ಸ್ ಓರ್ವರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಅವರು ಸುಳ್ಯದಿಂದ ಪ್ರತೀದಿನ ತನ್ನ ಮನೆಗೆ ಬರುತ್ತಿದ್ದರು ಎನ್ನಲಾಗಿದೆ. ಇಂದು ಅವರ ಗಂಟಲ ದ್ರವ ಮಾದರಿ ಪರೀಕ್ಷೆಯು ಪಾಸಿಟಿವ್ ಬಂದಿದೆ.ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ.
- Advertisement -