



ಕಡಬ: ಮೀನು ಮಾರಾಟದ ವಿಚಾರದಲ್ಲಿ ಎರಡು ಅಂಗಡಿಯವರಿಗೆ ಮಾತಿನ ಚಕಮಕಿ ನಡೆದು ಬಳಿಕ ಪರಸ್ಪರ ಹೊಡೆದಾಟ ನಡೆದಿದ್ದು, ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಡಬ ಗ್ರಾಮದ ಸಂತೆಕಟ್ಟೆ ಬಳಿ ಮೀನು ಮಾರಾಟಕಟ್ಟೆಯಲ್ಲಿ ನ.1ರಂದು ಬೆಳಿಗ್ಗೆ, ಮೀನು ಮಾರಾಟದ ವಿಚಾರದಲ್ಲಿ ಎರಡು ಅಂಗಡಿಯವರಿಗೆ ಮಾತಿನ ಚಕಮಕಿ ನಡೆದು ಬಳಿಕ ಪರಸ್ಪರ ಹೊಡೆದಾಟ ನಡೆದಿರುವ ಬಗ್ಗೆ ವಿಡಿಯೋ ಕಂಡುಬಂದ ಹಿನ್ನೆಲೆಯಲ್ಲಿ, ಕಡಬ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕ ಅಭಿನಂದನ ಎಮ್ ಎಸ್ ರವರು ಸದ್ರಿ ವಿಡಿಯೋವನ್ನು ಪರಿಶೀಲಿಸಿದಾಗ, ಮೀನು ಮಾರಾಟದ ವಿಚಾರಕ್ಕೆ ರಾಜು ಮ್ಯಾಥ್ಯೂ ಹಾಗೂ ಆದಂ ಎಂಬವರ ಎರಡು ಅಂಗಡಿಯವರ ನಡುವೆ ಮಾತಿನ ಚಕಮಕಿ ನಡೆದು ಬಳಿಕ ಸಾರ್ವಜನಿಕ ಸ್ಥಳದಲ್ಲಿ ರಾಜು ಮ್ಯಾಥ್ಯೂ, ಆದಂ, ಫಯಾಜ್, ರಕ್ಷೀತ್ ಮಾಣಿ, ನೌಫಾಲ್ ಎಂಬುವರುಗಳು ಪರಸ್ಪರ ಹೊಡೆದಾಟ ಮಾಡಿಕೊಂಡಿರುವುದು ತಿಳಿದುಬಂದಿದೆ.
ಸಾರ್ವಜನಿಕ ಸ್ಥಳದಲ್ಲಿ ಪರಸ್ಪರ ಹೊಡೆದಾಡಿಕೊಂಡು ಸಾರ್ವಜನಿಕ ಶಾಂತಿಭಂಗ ಉಂಟಾಗುವಂತೆ ಮಾಡಿದ ಸದ್ರಿ ವ್ಯಕ್ತಿಗಳ ವಿರುದ್ದ ಕಡಬ ಪೊಲೀಸ್ ಠಾಣೆಯಲ್ಲಿ ಅ.ಕ್ರ: 73/2025. ಕಲಂ: 194 (2) BNS-2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.








