Friday, May 3, 2024
spot_imgspot_img
spot_imgspot_img

ಕಡಬ: ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನ ಆ್ಯಸಿಡ್ ದಾಳಿ ಪ್ರಕರಣ:ಕೇರಳದ ಮತ್ತಿಬ್ಬರನ್ನು ವಶಕ್ಕೆ ಪಡೆದ ಪೊಲೀಸರು

- Advertisement -G L Acharya panikkar
- Advertisement -

ಕಡಬ: ಕಡಬದ ಸರಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬರನ್ನು ಗುರಿಯಾಗಿಸಿ ಮಾ.4ರ ಬೆಳಿಗ್ಗೆ ನಡೆದ ಆ್ಯಸಿಡ್ ದಾಳಿ ಪ್ರಕರಣದ ಆರೋಪಿಯಾಗಿರುವ ಕೇರಳ ಮೂಲದ ಎಂ.ಬಿ.ಎ.ವಿದ್ಯಾರ್ಥಿ ಅಭಿನ್ನನ್ನು ಮಾ.5ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿರುವ ಪೊಲೀಸರು ಪ್ರಕರಣದ ಹೆಚ್ಚಿನ ವಿಚಾರಣೆಗಾಗಿ ಆತನನ್ನು 10 ದಿನಗಳ ಕಾಲ ಕಸ್ಟಡಿಗೆ ಪಡೆದುಕೊಂಡಿದ್ದರು.

ಇದೀಗ ಇದರ ಮುಂದುವರಿದ ಭಾಗವಾಗಿ ಉಪಿನಂಗಡಿ ವೃತ್ತ ನಿರೀಕ್ಷಕರ ನೇತೃತ್ವದ ತಂಡ ಆರೋಪಿ ಜೊತೆ ಕೇರಳದ ಎರ್ನಾಕುಲಂ ಮತ್ತು ತಮಿಳುನಾಡಿನ ಕೊಯಮತ್ತೂರು ಪ್ರದೇಶಕ್ಕೆ ತೆರಳಿ ತನಿಖೆ ನಡೆಸಿರುವುದಾಗಿ ಮಾಹಿತಿ ಲಭಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದಲ್ಲಿ ಇಬ್ಬರನ್ನು ವಶಕ್ಕೆ ಪಡೆದು ಕಡಬಕ್ಕೆ ಕರೆತರಲಾಗಿದ್ದು, ವಿಚಾರಣೆಯ ಬಳಿಕ ಅಧಿಕೃತ ಮಾಹಿತಿ ದೊರಕಲಿದೆ. ಪೊಲೀಸರ ವಶದಲ್ಲಿರುವ ಇಬ್ಬರು ಈ ಪ್ರಕರಣದಲ್ಲಿ ಏನು ಪಾತ್ರ ವಹಿಸಿದ್ದಾರೆ ಎಂಬುದು ಪೊಲೀಸರ ವಿಚಾರಣೆಯಿಂದ ತಿಳಿದು ಬರಬೇಕಿದೆ. ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಆರೋಪಿ ಅಭಿನ್‌ಗೆ ಆ್ಯಸಿಡ್ ತಂದುಕೊಟ್ಟ ವ್ಯಕ್ತಿ ಹಾಗೂ ದಾಳಿ ನಡೆಸಿದ ದಿನ ಕಾಲೇಜಿನ ಸಮವಸ್ತ್ರ ಹೋಲುವ ಡ್ರೆಸ್ಸನ್ನು ಹೊಲಿದುಕೊಟ್ಟ ವ್ಯಕ್ತಿ ಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ .

- Advertisement -

Related news

error: Content is protected !!