Monday, August 10, 2026
spot_imgspot_img
spot_imgspot_img

ಕಡಬ: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಢಿಕ್ಕಿ ಹೊಡೆದು ಸವಾರ ಮೃತ್ಯು..!

- Advertisement -
- Advertisement -

ಕಡಬ: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ್ ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ಸಮೀಪದ ಹಳೆಸ್ಟೇಷನ್ ಎಂಬಲ್ಲಿ ನಡೆದಿದೆ.

ಮೃತಪಟ್ಟ ಯುವಕನನ್ನು ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಉದೇರಿ ನಿವಾಸಿ ದಿ. ಶ್ರೀಧರ ಗೌಡ ಎಂಬವರ ಪುತ್ರ ಬಿಶ್ವಜಿತ್(23) ಎಮದು ಗುರುತಿಸಲಾಗಿದೆ.

ಯುವಕ ಮರ್ಧಾಳದ ಪಾಲತ್ತಡ್ಕದಲ್ಲಿ ಫ್ಯಾಬ್ರಿಕೇಷನ್ ಕೆಲಸ ಮಾಡುತ್ತಿದ್ದು. ಎಂದಿನಂತೆ ಕೆಲಸ ಮುಗಿಸಿ ಮನೆಗೆ ಹೊರಟು ಕಡಬ ಕಡೆ ಬೈಕಿನಲ್ಲಿ ಬರುತ್ತಿದ್ದಾಗ ಹಳೆಸ್ಟೇಷನ್ ಬಳಿ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಒಮಿನಿ ಕಾರೊಂದನ್ನು ಹಿಂದಿಕ್ಕಿ ಹೋಗುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ಬಿಶ್ವಜಿತ್ ಬೈಕ್ ಗೆ ಢಿಕ್ಕಿ ಹೊಡೆದಿದೆ. ಕಡಬ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಘಟನೆ ವೇಳೆ ಒಮಿನಿ ಕಾರಿಗೂ ಹಾನಿಯುಂಟಾಗಿದೆ. ಮೃತ ಯುವಕ ತಾಯಿ, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ. ಘಟನಾ ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!