- Advertisement -
- Advertisement -
ಕಡಬ:- ಬೀಡಿ ಬ್ರ್ಯಾಂಚ್ ಗೆಂದು ತೆರಳಿದ ವಿವಾಹಿತ ಮಹಿಳೆಯೋರ್ವರು ಮನೆಗೆ ಹಿಂತಿರುಗದೆ ನಾಪತ್ತೆಯಾಗಿರುವ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾಪತ್ತೆಯಾಗಿರುವ ಮಹಿಳೆಯನ್ನು ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ದಾಸರಗುಡ್ಡೆ ನಿವಾಸಿ ಬಾಬು ಎಂಬವರ ಪತ್ನಿ ಸುಮತಿ ಎಂದು ಗುರುತಿಸಲಾಗಿದೆ. ಶನಿವಾರದಂದು ಬೀಡಿ ಕೊಡಲೆಂದು ತೆರಳಿದ್ದ ಸುಮತಿ ನಾಪತ್ತೆಯಾಗಿದ್ದು, ರಾತ್ರಿಯಾದರೂ ಮನೆಗೆ ಹಿಂತಿರುಗದೆ ಇದ್ದುದರಿಂದ ಹುಡುಕಾಡಿದ ಆಕೆಯ ಮನೆಯವರು ಪಕ್ಕದ ಮನೆಯ ವಿನಯ್ ಎಂಬಾತನ ಜೊತೆ ತೆರಳಿರುವ ಶಂಕೆ ವ್ಯಕ್ತಪಡಿಸಿ ಕಡಬ ಠಾಣೆಗೆ ದೂರು ನೀಡಿದ್ದಾರೆ.
- Advertisement -