


ಕಡಬ: ರಬ್ಬರ್ ಟ್ಯಾಪಿಂಗ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮರ್ದಾಳ ಸಮೀಪದ ಐತ್ತೂರು ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಸುರೇಶ ಎಂದು ಗುರುತಿಸಲಾಗಿದೆ.
ಸುಬ್ರಹ್ಮಣ್ಯ ರಬ್ಬರ್ ವಿಭಾಗದ RRK 2014 ನೇ ರಬ್ಬರ್ ತೋಟ ಮರ್ಧಾಳ ಬ್ರಾಂತಿಕಟ್ಟೆ ಎಂಬಲ್ಲಿ ಖಾಯಂ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿರುವಾಗ ಹೃದಯಾಘಾತ ಅಥವಾ ಇನ್ನಾವುದೋ ಖಾಯಿಲೆಯಿಂದ ಮೃತಪಟ್ಟಿರುವುದಾಗಿದೆ.
ಅ.25 ರಂದು ಮದ್ಯಾಹ್ನದ ವೇಳೆ ರಬ್ಬರ್ ಟ್ಯಾಪಿಂಗ್ ಮಾಡುತ್ತಿರುವ ಸಮಯ ಕುಸಿದು ಬಿದ್ದಿದ್ದು ಚಿಕಿತ್ಸೆಗಾಗಿ ಕಡಬ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದು ವೈದ್ಯಾಧಿಕಾರಿಯವರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಪತ್ನಿ ದಿವ್ಯ ಅವರು ಒಂದು ವಾರದ ಹಿಂದೆ ದೀಪಾವಳಿ ಹಬ್ಬದ ಪ್ರಯುಕ್ತ ಅವರ ಮಕ್ಕಳನ್ನು ಕರೆದುಕೊಂಡು ಸುಳ್ಯ ತಾಲೂಕಿನ ಕೂಟೇಲು ಎಂಬಲ್ಲಿಗೆ ಹೋಗಿದ್ದರು. ಪತಿಯ ಅಣ್ಣನ ಮಗ ದೂರವಾಣಿ ಕರೆ ಮಾಡಿ ಮಾಹಿತಿ ನೀಡಿದ್ದು ಸುಳ್ಯದಿಂದ ಹೊರಟು ಕಡಬ ಸರಕಾರಿ ಆಸ್ಪತ್ರೆಗೆ ಬಂದಾಗ ವೈದ್ಯಾಧಿಕಾರಿಯವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








