Thursday, June 18, 2026
spot_imgspot_img
spot_imgspot_img

ಕಡಬ:ನೂಜಿಬಾಳ್ತಿಲ ಸರ್ಕಾರಿ ಶಾಲಾ ಕಟ್ಟಡದ ಶಿಲಾನ್ಯಾಸ ನೆರವೇರಿಸಿದ- ಕೋಟಾ ಶ್ರೀನಿವಾಸ ಪೂಜಾರಿ.

- Advertisement -
- Advertisement -

ಕಡಬ: ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಒದಗಿಸುವುದರೊಂದಿಗೆ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲಾಗುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಮತ್ತು ಮುಜರಾಯಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.

ಬುಧವಾರ ಕಡಬ ತಾಲೂಕಿನ ನೂಜಿಬಾಳ್ತಿಲ ಉನ್ನತ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಿ ಅವರು ಪ್ರತಿಭಾನ್ವಿತ ಶಿಕ್ಷಕರನ್ನೇ ಆಯ್ಕೆ ಮಾಡಿ ಉತ್ತಮ ಶಿಕ್ಷಣ ನೀಡುವ ಕೆಲಸವಾಗುತ್ತಿದೆ.  ರಾಜ್ಯ ಬಜೆಟ್‌ನಲ್ಲಿ ಶೇ. 16ರಿಂದ 17ರಷ್ಟು ಹಣವನ್ನು ಶಿಕ್ಷಣ ಕ್ಷೇತ್ರಕ್ಕೆ ಮೀಸಲಿಡಲಾಗುತ್ತಿದೆ. ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಒತ್ತು ನೀಡುತ್ತಾ ಎಲ್ಲಾ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ ಎಂದರು.

- Advertisement -

Related news

error: Content is protected !!