Thursday, June 18, 2026
spot_imgspot_img
spot_imgspot_img

ಕಡಬ: ಖಾಕಿಯ ಕಾಮಪುರಾಣ; 5 ತಿಂಗಳ ಗರ್ಭಿಣಿಯನ್ನಾಗಿಸಿದ ಪೊಲೀಸ್ ಪೇದೆ..! ಅಜ್ಞಾತ ಜಾಗದಲ್ಲಿ ಇರಿಸಿ ಗರ್ಭಪಾತ ನಡೆಸಿದ ಭೂಪ.! FIR ದಾಖಲು

- Advertisement -
- Advertisement -

ಕಡಬ: ಈ ಹಿಂದೆ ನಡೆದ ಪ್ರಕರಣವೊಂದರಲ್ಲಿ ಸಂತ್ರಸ್ಥೆಯಾಗಿದ್ದ ಅಪ್ರಾಪ್ತೆಯನ್ನು ತನ್ನ ಕಾಮದಾಟಕ್ಕೆ ಬಳಸಿಕೊಂಡಿದ್ದ ಕಡಬ ಕಡಬ ಠಾಣೆಯ ಪೋಲಿಸ್ ಸಿಬ್ಬಂದಿ ಶಿವರಾಜ್ ವಿರುದ್ದ ದೂರು ದಾಖಲಾಗಿದೆ. ಎರಡು ವರ್ಷಗಳ ಹಿಂದೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಯುವತಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಳು. ಈ ವೇಳೆ ಪರಿಚಯ ಮಾಡಿಕೊಂಡಿದ್ದ ಕಡಬ ಠಾಣೆಯ ಪೋಲಿಸ್ ಸಿಬ್ಬಂದಿ ಶಿವರಾಜ್ ಪದೇ ಪದೇ ಮನೆಗೆ ಬರುತ್ತಿದ್ದ ನಂತರ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಶಿವರಾಜ್ ತನ್ನ ಕಾಮದಾಟಕ್ಕೆ ಯುವತಿಯನ್ನು ಬಳಸಿಕೊಂಡು ಗರ್ಭಾವತಿಯನ್ನಾಗಿಸಿದ್ದಾನೆ. ಮಗಳು 5 ತಿಂಗಳ ಗರ್ಭಿಣಿ ಎಂದು ತಿಳಿಯುತ್ತಿದ್ದಂತೆ ಶಿವರಾಜ್‌ನನ್ನು ಸಂಪರ್ಕಿ ನನ್ನ ಮಗಳನ್ನು ಮದುವೆಯಾಗು ಎಂದಿದ್ದಾರೆ. ಇದಕ್ಕೆ ಒಪ್ಪದ ಶಿವರಾಜ್ ನಾನು ಮದುವೆಯಾಗುವುದಿಲ್ಲ, ಗರ್ಭಿಣಿ ಆಗಿದ್ದರೆ ಅದನ್ನು ಅಬಾರ್ಷನ್ ಮಾಡಿಸುತ್ತೇನೆ. ಅದಕ್ಕೆ ತಗಲುವ ಖರ್ಚು ಕೊಡುತ್ತೇನೆ ಎಂದು ಹೇಳಿ ತನ್ನ ಕೃತ್ಯವನ್ನು ಮರೆಮಾಚುವ ಪ್ರಯತ್ನ ಮಾಡಿದ್ದಾನೆ. ಇದಕ್ಕೆ ಒಪ್ಪದ ಯುವತಿಯ ತಂದೆ ನೀನು ಖರ್ಚು ಕೊಡುವುದು ಬೇಡ ಅಬಾರ್ಷನ್ ಮಾಡಿಸುವುದೂ ಬೇಡ ಎಂದು ಹೇಳಿದ್ದಾರೆ.

ಅಜ್ಞಾತ ಸ್ಥಳದಲ್ಲಿ ತಾಯಿ ಮಗಳನ್ನು ಕೂಡಿ ಹಾಕಿ ಗರ್ಭಪಾತ

ಇಷ್ಟಕ್ಕೆ ಸುಮ್ಮನಾಗದ ಶಿವರಾಜ್ ಇದೇ ತಿಂಗಳು ಯುವತಿ ಹಾಗೂ ಆಕೆಯ ತಾಯಿಯನ್ನು ಸಂಪರ್ಕಿಸಿ ಅಬಾರ್ಷನ್ ಮಾಡಲು ಸಿದ್ಧತೆ ಮಾಡಿದ್ದಾನೆ. ಸೆ. 18 ರಂದು ತಾಯಿ ಮಗಳು ಆಸ್ಪತ್ರೆಗೆ ಹೋಗಿ ಬರುವುದಾಗಿ ಹೇಳಿ ಹೋದವರು ಮತ್ತೆ ಮನೆಗೆ ಬಂದಿಲ್ಲ. ವಿಚಾರಿಸುವಾಗ ಅಬಾರ್ಷನ್ ಮಾಡಲಾಗಿದೆ ಎಂದು ತಿಳಿದುಬಂದಿದೆ. 35,000 ಖರ್ಚನ್ನು ಶಿವರಾಜ್ ಪೋಲಿಸ್ ಆನ್ಲೈ ನ್ ಟ್ರಾನ್ಸ್ಪರ್ ಮಾಡಿದ್ದಾನೆಂದೂ, ನಾವು ಒಂದು ಕಡೆ ಇದ್ದೇವೆ, ಎಲ್ಲಿ ಅಂತ ಹೇಳುವುದಿಲ್ಲ ಎಂದು ನನ್ನ ಪತ್ನಿ ಹೇಳುತ್ತಿದ್ದಾಳೆ.

ಆದುದರಿಂದ ಅತ್ಯಾಚಾರ ಎಸಗಿರುವ ಶಿವರಾಜ್ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕು, ಮತ್ತು ನನ್ನ ಮಗಳು ಹಾಗೂ ಪತ್ನಿ ಶಿವರಾಜ್ ಅವನ ಸುಪರ್ಧಿಯಲ್ಲಿ ಮಂಗಳೂರಿನ ಎಲ್ಲಿಯೋ ಅಜ್ಞಾತ ಸ್ಥಳದಲ್ಲಿರುವ ಅವರನ್ನು ಪತ್ತೆ ಹಚ್ಚಬೇಕು, ಇದಕ್ಕೆಲ್ಲ ಪೋಲಿಸ್ ಪ್ರಭಾವ ಬಳಸಿ ನಮ್ಮನ್ನು ಬೆದರಿಸುತ್ತಿರುವ ಶಿವರಾಜ್ ವಿಚಾರಣೆ ನಡೆಸಿದಾಗ ಎಲ್ಲ ವಿಚಾರ ಬಹಿರಂಗವಾಗಲಿದೆ, ಆದುದರಿಂದ ನನ್ನ ಮಗಳಿಗೆ ಆಗಿರುವ ಅನ್ಯಾಯಕ್ಕೆ ಸೂಕ್ತ ನ್ಯಾಯ ಕೊಡಿಸುವಂತೆ ಸಂತ್ರಸ್ಥೆಯ ತಂದೆ ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!