Saturday, June 28, 2025
spot_imgspot_img
spot_imgspot_img

ಕಡಬ: ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ; ಸೊತ್ತುಗಳು ಸಹಿತ ಮೂವರು ವಶಕ್ಕೆ..!

- Advertisement -
- Advertisement -

ಕಡಬ: ನಗರದ ಪೊಲೀಸ್ ಠಾಣಾ ವ್ಯಾಪ್ತಿಯ ಹಳೇ ನೇರಂಕಿ ಗ್ರಾಮದ ನೇರಂಕಿ ಎಂಬಲ್ಲಿನ ತೋಟವೊಂದರಲ್ಲಿ, ಅಕ್ರಮವಾಗಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿದ್ದ ಮಾಹಿತಿ ಮೇರೆಗೆ, ಕಡಬ ಠಾಣಾ ಪೊಲೀಸರು ದಾಳಿ ನಡೆಸಿದ್ದಾರೆ.

ಈ ವೇಳೆ ಕೃತ್ಯದಲ್ಲಿ ತೊಡಗಿದ್ದ 8 ಮಂದಿ ಪರಾರಿಯಾಗಿದ್ದು, 3 ಜನರನ್ನು ವಶಕ್ಕೆ ಪಡೆಯಲಾಗಿದೆ. ಸ್ಥಳದಲ್ಲಿದ್ದ 6 ಬೈಕ್, 2 ಕಾರು, 4 ಕೋಳಿ, ಕೋಳಿ ಅಂಕಕ್ಕೆ ಬಳಸಲಾಗುವ ಕತ್ತಿ ಹಾಗೂ ನಗದು ಹಣ 3,560 ರೂ ವಶಕ್ಕೆ ಪಡೆದುಕೊಂಡು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

- Advertisement -

Related news

error: Content is protected !!