- Advertisement -
- Advertisement -
ಕಡಬ:-ಯುವತಿಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಆಲಂಕಾರು ಗ್ರಾಮದ ಶರವೂರು ಎಂಬಲ್ಲಿ ಬುಧವಾರದಂದು ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಆಲಂಕಾರು ಗ್ರಾಮದ ಶರವೂರು ಸಮೀಪದ ಪಾಂಜೋಡಿ ಕಾಲೋನಿ ನಿವಾಸಿ ಕರಿಯ ಎಂಬವರ ಪುತ್ರಿ ಸಂಧ್ಯಾ (22) ಎಂದು ಗುರುತಿಸಲಾಗಿದೆ. ಈಕೆ ಬುಧವಾರ ಬೆಳಿಗ್ಗೆ ಮನೆಯ ಸಮೀಪದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ. ಈ ಬಗ್ಗೆ ಕಡಬ ಪೊಲೀಸರಿಗೆ ಯುವತಿಯ ಮನೆಯವರು ದೂರು ನೀಡಿದ್ದಾರೆ.
- Advertisement -