Sunday, May 5, 2024
spot_imgspot_img
spot_imgspot_img

ಕಡಬ: ಹ್ಯಾಕರ್ ಗಳ ಸುಳಿಗೆ ಸಿಲಕಿ ಸೌದಿಯಲ್ಲಿ ಬಂಧಿಯಾಗಿದ್ದ ಕಡಬದ ಯುವಕ ಬಿಡುಗಡೆ – ಸ್ವದೇಶಕ್ಕೆ ಆಗಮನ..!

- Advertisement -G L Acharya panikkar
- Advertisement -

ಕಡಬ: ಹ್ಯಾಕರ್ ಗಳ ಕೈಗೆ ಸಿಲುಕಿ ವಂಚನೆ ಆರೋಪದಲ್ಲಿ ಸೌದಿ ಅರೇಬಿಯಾದ ರಿಯಾದ್ ನಲ್ಲಿ ಜೈಲಿನಲ್ಲಿ ಬಂಧಿಯಾಗಿದ್ದ ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರು ಗ್ರಾಮದ ಮೂಜೂರು ನಿವಾಸಿ ಚಂದ್ರಶೇಖರ್‌ ಬಂಧಮುಕ್ತನಾಗಿದ್ದು, ಇಂದು ಸ್ವದೇಶಕ್ಕೆ ಆಗಮಿಸಲಿದ್ದಾರೆ.

ಚಂದ್ರಶೇಖರ್‌ ಅವರನ್ನು ಸೌದಿ ಅರೇಬಿಯಾದ ರಿಯಾದ್‌ನಿಂದ ಅಲ್ಲಿನ ಪೊಲೀಸರು ಅವರನ್ನು ವಿಮಾನದಲ್ಲಿ ಮುಂಬಯಿಗೆ ಕಳುಹಿಸಿಕೊಡಲಿದ್ದು, ಅವರು ಮುಂಬಯಿನಿಂದ ಸಂಜೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಚಂದ್ರಶೇಖರ್ ಕಂಪೆನಿಯ ಪ್ರಮೋಶನ್ ಪಡೆದು ಸೌದಿಗೆ ತೆರಳಿದ್ದರು. ಈ ನಡುವೆ 2022ರ ನವೆಂಬರ್ ನಲ್ಲಿ ಮೊಬೈಲ್ ಮತ್ತು ಸಿಮ್‌ ಖರೀದಿಗೆ ರಿಯಾದ್‌ನ ಅಂಗಡಿಗೆ ಭೇಟಿ ನೀಡಿದ್ದರು. ಅರ್ಜಿಯೊಂದಕ್ಕೆ ಎರಡು ಬಾರಿ ಹೆಬ್ಬೆಟ್ಟು ನೀಡಿದ್ದರು. ಇದೇ ಅವರು ಮಾಡಿದ್ದ ಎಡವಟ್ಟು, ಒಂದು ವಾರದ ಬಳಿಕ ಅರೇಬಿಕ್‌ ಭಾಷೆಯಲ್ಲಿ ಹೊಸ ದೂರವಾಣಿ ಸಂಖ್ಯೆಗೆ ಸಂದೇಶ ಬಂದಿತ್ತು. ಅದನ್ನು ತೆರೆದು ಚಂದ್ರಶೇಖರ್‌ ನೋಡಿದ್ದರು. 2 ದಿನಗಳ ಬಳಿಕ ದೂರವಾಣಿ ಕರೆ ಬಂದು ಸಿಮ್‌ನ ಬಗ್ಗೆ ಮಾಹಿತಿ ಕೇಳಲಾಗಿತ್ತು. ಒಟಿಪಿ ತಿಳಿಸಿದ್ದರು. ವಾರದ ಬಳಿಕ ಅಲ್ಲಿನ ಪೊಲೀಸರು ಬಂದು ಚಂದ್ರಶೇಖರ್‌ ಅವರನ್ನು ಬಂಧಿಸಿದ್ದರು.

ಇವರನ್ನು ಬಂಧಿಸಿದ ಕಾರಣ ಏನೆಂದರೆ ಚಂದ್ರಶೇಖರ್‌ಗೆ ತಿಳಿಯದಂತೆ ಅಲ್ಲಿನ ಬ್ಯಾಂಕೊಂದರಲ್ಲಿ ಅವರದೇ ಹೆಸರಿನಲ್ಲಿ ಹ್ಯಾಕರ್‌ಗಳು ಖಾತೆ ತೆರೆದಿದ್ದರು. ಅಲ್ಲಿನ ಮಹಿಳೆಯೊಬ್ಬರ ಖಾತೆಯಿಂದ ಚಂದ್ರಶೇಖರ್‌ ಖಾತೆಗೆ 22 ಸಾವಿರ ರಿಯಲ್‌ ಜಮೆಯಾಗಿ, ಅದರಿಂದ ಕೂಡಲೇ ಬೇರೆ ಯಾವುದೋ ದೇಶಕ್ಕೆ ಆ ಹಣ ವರ್ಗಾವಣೆಯಾಗಿತ್ತು. ಇನ್ನು ಹಣ ಕಳೆದುಕೊಂಡ ಮಹಿಳೆ ಚಂದ್ರಶೇಖರ್‌ ಅವರ ಖಾತೆಗೆ ಹಣ ಜಮೆಯಾಗಿರುವುದನ್ನು ಗಮನಿಸಿ ಪೊಲೀಸರಿಗೆ ದೂರು ನೀಡಿದ್ದರು. ಆ ಹಿನ್ನೆಲೆಯಲ್ಲಿ ಚಂದ್ರಶೇಖರ್‌ ಅವರನ್ನು ಬಂಧಿಸಲಾಗಿತ್ತು. ಬಂಧನವಾಗಿರುವ ಬಗ್ಗೆ ಚಂದ್ರಶೇಖರ್‌ ಅವರ ಗೆಳೆಯರು ಮನೆಯವರಿಗೆ ತಿಳಿಸಿದ್ದರು.

ಚಂದ್ರಶೇಖರ್‌ ಅವರ ಸ್ನೇಹಿತರು 10 ಲಕ್ಷ ರೂ ಸಂಗ್ರಹಿಸಿ ಅಲ್ಲಿನ ವಕೀಲರಿಗೆ ನೀಡಿದ್ದರು. ಹಣ ಕಳೆದುಕೊಂಡ ಮಹಿಳೆಗೆ ಸುಮಾರು 6 ಲಕ್ಷ ರೂ ಹಣವನ್ನು ಪಾವತಿಸಲಾಗಿತ್ತು. ಆದರೂ ಬಿಡುಗಡೆ ಸಾಧ್ಯವಾಗಿರಲಿಲ್ಲ, ಮಾಧ್ಯಮ ವರದಿಯ ಬಳಿಕ ಅಲ್ಲಿನ ಕಂಪನಿ ಎಚ್ಚೆತ್ತುಕೊಂಡು ನಿರಪರಾಧಿ ಚಂದ್ರಶೇಖರ್‌ ಅವರ ಬಿಡುಗಡೆಗೆ ಕೈಜೋಡಿಸಿತ್ತು. ಚಂದ್ರಶೇಖರ್‌ ಬಿಡುಗಡೆಗೆ ಮಡಿಕೇರಿಯ ಬಿ ಆರ್‌ ಅರುಣ್‌ ಕುಮಾರ್‌ ಹಾಗೂ ಮಂಗಳೂರಿನ ಕಬೀರ್‌ ನಿರಂತರ ಪ್ರಯತ್ನ ಮಾಡಿದ್ದರು.

- Advertisement -

Related news

error: Content is protected !!