Monday, August 31, 2026
spot_imgspot_img
spot_imgspot_img

ಕಡಬ: ಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ಮೃತ್ಯು..!!

- Advertisement -
- Advertisement -

ಕಡಬ: ಅನಾರೋಗ್ಯದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ನಡೆದಿದೆ.

ಕುಟ್ರುಪ್ಪಾಡಿ ಗ್ರಾಮದ ಹೊಸಮಠ ಉಳಿಪು ನಿವಾಸಿ ಗಿರಿಯಪ್ಪ ಗೌಡ ಅವರ ಪುತ್ರ ಸುಮಂತ್(32ವ.)ರವರು ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟ ಯುವಕ.

ಸುಮಂತ್ ಅವರು ಕಳೆದ ಎರಡು ವರ್ಷಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. ಕೆಲ ದಿನಗಳಿಂದ ಅವರ ಆರೋಗ್ಯದಲ್ಲಿ ಮತ್ತಷ್ಟೂ ಏರುಪೇರಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದವರು ಚಿಕಿತ್ಸೆಗೆ ಸ್ಪಂದಿಸದೆ ಜೂ.22ರಂದು ರಾತ್ರಿ ನಿಧನರಾಗಿದ್ದಾರೆ. ಮೃತರು ತಂದ ಗಿರಿಯಪ್ಪ ಗೌಡ, ತಾಯಿ ಇಂದಿರಾ, ಪತ್ನಿ, ಇಬ್ಬರು ಪುತ್ರರು ಹಾಗೂ ಸಹೋದರಿಯನ್ನು ಅಗಲಿದ್ದಾರೆ. ಸುಮಂತ್ ಅವರು ಕಳೆದ ನಾಲೈದು ವರ್ಷಗಳಿಂದ ಗುಂಡ್ಯ ಪರಶುರಾಮ ಕ್ರೇನ್‌ನಲ್ಲಿ ಕೆಲಸ ಮಾಡುತ್ತಿದ್ದರು.

- Advertisement -

Related news

error: Content is protected !!