- Advertisement -
- Advertisement -


ಕಡೇಶಿವಾಲಯ: ಮಹತೋಭಾರ ಚಿಂತಾಮಣಿ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಾಲಯದಲ್ಲಿ ಏ. 1 ರಿಂದ ಏ. 22 ರವರೆಗೆ ವರ್ಷಾವಧಿ ಜಾತ್ರಾ ಮಹೋತ್ಸವ ನಡೆಯಲಿದೆ. ಏ. 9 ನೇ ಬುಧವಾರದಂದು ಮಧ್ಯಾಹ್ನ ಶ್ರೀ ದೇವರಿಗೆ ಮಹಾ ಪೂಜೆ ನಡೆಯಿತು. ನಂತರ ಧ್ವಜಾರೋಹಣದೊಂದಿಗೆ ಜಾತ್ರೋತ್ಸವಕ್ಕೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಅರ್ಚಕರು, ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಪುರುಷೋತ್ತಮ ಆರ್ ಶೆಟ್ಟಿ, ನಡ್ಯೇಲು ನುಳಿಯಾಲು ಸೇರಿದಂತೆ ವ್ಯವಸ್ಥಾಪನ ಸಮಿತಿ ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.



- Advertisement -