Thursday, July 23, 2026
spot_imgspot_img
spot_imgspot_img

ಕಲಬುರಗಿ: ಕಬ್ಬು ನಾಟಿ ಮಾಡುತ್ತಿದ್ದಾಗ ಸಿಡಿಲು ಬಡಿದು ಯುವಕ ಸಾವು!

- Advertisement -
- Advertisement -

ಕಲಬುರಗಿ: ಕಬ್ಬು ನಾಟಿ ಮಾಡುತ್ತಿದ್ದಾಗ ಸಿಡಿಲು ಬಡಿದು ಯುವ ರೈತ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಶಾದಿಪುರ ತಾಂಡಾದಲ್ಲಿ ನಡೆದಿದೆ.

ಮಹೇಶ್ ಚೌವ್ಹಾಣ್ (24) ಸಿಡಿಲಿಗೆ ಬಲಿಯಾದ ರೈತ. ಕಲಬುರಗಿ ಜಿಲ್ಲೆಯ ವಿವಿಧೆಡೆ ಇಂದು ಬಿರುಗಾಳಿ, ಗುಡುಗು ಸಹಿತ ಮಳೆಯಾಗಿದೆ. ಈ ವೇಳೆ ಜಮೀನಿನಲ್ಲಿ ಕಬ್ಬು ನಾಟಿ ಮಾಡಲೆಂದು ಹೋಗಿದ್ದ ಮಹೇಶ್ ಸಿಡಿಲಿಗೆ ಬಲಿಯಾಗಿದ್ದಾನೆ.

ಘಟನಾ ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುಂಚಾವರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎಂದು ವರದಿ ಮೂಲಕ ತಿಳಿದು ಬಂದಿದೆ.

- Advertisement -

Related news

error: Content is protected !!