Wednesday, October 7, 2026
spot_imgspot_img
spot_imgspot_img

ಕಲಬುರಗಿ: ಪತ್ನಿಯನ್ನು ಕತ್ತು ಹಿಸುಕಿ ಕೊಂದ ಪತಿ, ಆತ್ಮಹತ್ಯೆ ಎಂದು ಬಿಂಬಿಸಲು ಯತ್ನ!ಆರೋಪಿ ವಶಕ್ಕೆ

- Advertisement -
- Advertisement -

ಕಲಬುರಗಿ: ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ ಮಾಡಿ ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಕಲಬುರಗಿಯ ಚಿಂಚೋಳಿ ಪಟ್ಟಣದಲ್ಲಿ ನಡೆದಿದೆ.

ಪತ್ನಿಯನ್ನು ಕೊಲೆ ಮಾಡಿದ ಬಳಿಕ ಆತ್ಮಹತ್ಯೆ ಮಾಡಿಕೊಂಡಂತೆ ಬಿಂಬಿಸಲು ಪತಿ ಮುಂದಾಗಿದ್ದ. ಚಿಂಚೋಳಿ ಪಟ್ಟಣದ ಪ್ರಿಯಾಂಕಾ ಹಡಪದ್ (30) ಮೃತಪಟ್ಟ ಮಹಿಳೆ. ಸೂರ್ಯಕಾಂತ್ ವಕೀಲ ವೃತ್ತಿ ಮಾಡಿಕೊಂಡಿದ್ದ ಎನ್ನಲಾಗಿದೆ.

ಮಕ್ಕಳಾಗಿಲ್ಲ ಎಂಬ ಕಾರಣಕ್ಕೆ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಸೂರ್ಯಕಾಂತ್ ಪತ್ನಿಗೆ ಕಿರುಕುಳ ನೀಡುತ್ತಿದ್ದ ಎಂದು ಪ್ರಿಯಾಂಕಾ ಕುಟುಂಬಸ್ಥರು ಆರೋಪಿಸಿದ್ದಾರೆ. ಇದೇ ವಿಚಾರವಾಗಿ ಇಬ್ಬರ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ಸೂರ್ಯಕಾಂತ್ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.

ಕೊಲೆ ಬಳಿಕ ಪ್ರಕರಣವನ್ನು ಆತ್ಮಹತ್ಯೆ ಎಂದು ಬಿಂಬಿಸಲು ಸೂರ್ಯಕಾಂತ್ ಪ್ರಯತ್ನಿಸಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಘಟನೆ ಬಗ್ಗೆ ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಪ್ರಿಯಾಂಕಾ ಕುಟುಂಬಸ್ಥರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಸೂರ್ಯಕಾಂತ್‌ನನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣದ ಕುರಿತು ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!