Wednesday, April 24, 2024
spot_imgspot_img
spot_imgspot_img

“ಕಳಸಾ ಬಂಡೂರಿ” ನಾಲಾ ತಿರುವು ಯೋಜನೆಗೆ ಆಡಳಿತಾತ್ಮಕ ಒಪ್ಪಿಗೆ ನೀಡಿದ ಸರ್ಕಾರ. ‘ರಮೇಶ್ ಜಾರಕಿಹೊಳಿ‌’ ಹರ್ಷ.

- Advertisement -G L Acharya panikkar
- Advertisement -

ಬೆಂಗಳೂರು:-ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಕಣಕುಂಬಿ ಗ್ರಾಮದ ಬಳಿ ಮಹದಾಯಿ‌ ನದಿಗೆ ಅಣೆಕಟ್ಟು ನಿರ್ಮಿಸಿ ಕೂಡು ಕಾಲುವೆ ಮುಖಾಂತರ 1.72 ಟಿ ಎಂ ಸಿ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಲಪ್ರಭಾ ನದಿಗೆ ತಿರುಗಿಸುವ ಕಳಸಾ ನಾಲಾ ತಿರುವು ಯೋಜನೆಗೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ.ಹಾಗೆಯೇ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ನೆರಸೆ ಗ್ರಾಮದ ಬಳಿ ಬಂಡೂರ ಹಳ್ಳಕ್ಕೆ ಅಣೆಕಟ್ಟು ನಿರ್ಮಿಸಿ, ಕೂಡು ಕಾಲುವೆ ಮುಖಾಂತರ 2.18 ಟಿ ಎಂ ಸಿ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ ಬಳಸಿಕೊಳ್ಳಲು ಮಲಪ್ರಭಾ ನದಿಗೆ ತಿರುಗಿಸುವ ಬಂಡೂರಿ ನಾಲಾ ತಿರುವು ಯೋಜನೆಗೂ ಆಡಳಿತಾತ್ಮಕ ಅನುಮೋದನೆ‌ ನೀಡಿದೆ‌.

ಮಹತ್ವಾಕಾಂಕ್ಷೆಯ ಈ ಕಳಸಾ – ಬಂಡೂರಿ ಕುಡಿಯುವ ನೀರಿನ‌ ಯೋಜನೆಗಳ ವಿಸ್ತೃತ ಯೋಜನಾ ವರದಿಗೆ ತಾತ್ವಿಕ ಆಡಳಿತಾತ್ಮಕ‌ ಅನುಮೋದನೆ‌ ನೀಡಿದ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರನ್ನು ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ‌ ಅವರು ಅಭಿನಂದಿಸಿದ್ದಾರೆ.ರಾಜ್ಯ ಸರ್ಕಾರವು ಒಂದು ವರ್ಷದ ಅವಧಿಯನ್ನು ಪೂರ್ಣಗೊಳಿಸುತ್ತಿರುವ ಈ ಸುಸಂದರ್ಭದಲ್ಲಿ ಉತ್ತರ ಕರ್ನಾಟಕ ಭಾಗದ ಬಹು ದಿನಗಳ ಬೇಡಿಕೆಯಾಗಿದ್ದ ಈ ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆಯ ಅನುಷ್ಠಾನಕ್ಕೆ ಈ ಸರ್ಕಾರ ಕಟಿಬದ್ಧವಾಗಿದ್ದು, ಶೀಘ್ರದಲ್ಲಿಯೇ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ ಈ ಯೋಜನೆಯ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು ಎಂದು ರಮೇಶ್ ಜಾರಕಿಹೊಳಿ‌ ತಿಳಿಸಿದ್ದಾರೆ.

- Advertisement -

Related news

error: Content is protected !!