Friday, November 6, 2026
spot_imgspot_img
spot_imgspot_img

ಕಲಬುರಗಿ: ಹಾಸ್ಟೆಲ್‌ನ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಸಾವು

- Advertisement -
- Advertisement -

ಕಲಬುರಗಿ: ಹಾಸ್ಟೆಲ್‌ನ ನಾಲ್ಕನೇ ಮಹಡಿ ಮೇಲಿಂದ ಬಿದ್ದು ವಿದ್ಯಾರ್ಥಿ ಅನುಮಾನಾಸ್ಪದವಾಗಿ ಸಾವನಪ್ಪಿರುವ ಘಟನೆ ಕಲಬುರಗಿ ನಗರದ ರಾಜಾಪುರ ಬಡಾವಣೆ ಬಳಿಯ ಅಂಬೇಡ್ಕರ್ ವಸತಿ ನಿಲಯದಲ್ಲಿ ನಡೆದಿದೆ.

ಮುಜಾಹೀದ್ ಪಟೇಲ್ (25) ಮೃತ ವಿದ್ಯಾರ್ಥಿ. ಈತ ಕಲಬುರಗಿಯ ಪ್ರತಿಷ್ಠಿತ ಕಾಲೇಜೊಂದರಲ್ಲಿ ಬಿಎಸ್‌ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದು ತಡರಾತ್ರಿ ಹಾಸ್ಟೆಲ್ ಮೇಲಿಂದ ಬಿದ್ದಿದ್ದಾನೆ.

ಇನ್ನು ಮೊನ್ನೆಯಷ್ಟೆ ಇದೇ ಹಾಸ್ಟೆಲ್‌ನಲ್ಲಿ ಓರ್ವ ವಿದ್ಯಾರ್ಥಿಯನ್ನ ಬೆತ್ತಲುಗೊಳಿಸಿ ಮಾರಣಾಂತಿಕವಾಗಿ ಹಲ್ಲೆಗೊಳಿಸಲಾಗಿತ್ತು. ಆ ಘಟನೆ ಮಾಸುವ ಮುನ್ನವೇ ಮತ್ತೊಬ್ಬ ವಿದ್ಯಾರ್ಥಿ ಅನುಮಾನಸ್ಪದವಾಗಿ ಸಾವನಪ್ಪಿದ್ದು, ಇದು ಆತ್ಮಹತ್ಯೆಯೋ, ಕೊಲೆಯೋ ಎನ್ನುವ ಬಗ್ಗೆ ಅನುಮಾನ ವ್ಯಕ್ತವಾಗುತ್ತಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆ ಕುರಿತು ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!