- Advertisement -
- Advertisement -
ವಿಟ್ಲ: ಕಲ್ಲಡ್ಕ ಅನುಗ್ರಹ ಮಹಿಳಾ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದೆ.
ಕಲಾವಿಭಾಗದಲ್ಲಿ ಶೇ.೮೨ ಫಲಿತಾಂಶ ದಾಖಲಾಗಿದ್ದು, ವಾಣಿಜ್ಯ ವಿಭಾಗದಲ್ಲಿ ಶೇ.೯೮.೩೦ ಫಲಿತಾಂಶ ದಾಖಲಾಗಿದೆ.
ವಾಣಿಜ್ಯ ವಿಭಾಗದಲ್ಲಿ ೮ ಮಂದಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದರೆ,೩೬ ಮಂದಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಕಲಾವಿಭಾಗದಲ್ಲಿ ಒಬ್ಬರು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದರೆ, ೧೩ ಮಂದಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ಮರಿಯಮ್ ರಾಯಸ ೫೫೮, ಫಾತಿಮತ್ ನಿಶಾನ್ ೫೩೯, ಆಯಿಷಾ ಸಫ್ವಾತ್ ೫೩೩, ಸ್ವಹಾಸಾನ ೫೨೫, ಕಲಾ ವಿಭಾಗದಲ್ಲಿ ರಮ್ಲಾತ್ ಜಿಎಂ ೫೩೦ ಅಂಕ ಪಡೆದು ಉತ್ತಮ ಸಾಧನೆ ಮಾಡಿದ್ದಾರೆ.ವಿದ್ಯಾರ್ಥಿನಿಯರ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರು, ಪ್ರಾಂಶುಪಾಲರು ಮತ್ತು ಉಪನ್ಯಾಸಕಿ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
- Advertisement -