Thursday, July 23, 2026
spot_imgspot_img
spot_imgspot_img

ಕಲ್ಲಡ್ಕ: ವೀರಕಂಭ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷರಾದ ದಿಲೀಪ್ ಕುಮಾರ್ ವಿಧಿವಶ!

- Advertisement -
- Advertisement -

ಕಲ್ಲಡ್ಕ: ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ದಿಲೀಪ್ ಕುಮಾರ್ (65)ರವರು ಅಲ್ಪಕಾಲದ ಅನಾರೋಗ್ಯದಿಂದಾಗಿ ಇಂದು ದೇರಳಕಟ್ಟೆ ಆಸ್ಪತ್ರೆಯಲ್ಲಿ ದೈವಾಧೀನರಾಗಿದ್ದಾರೆ.

ಕೃಷಿಕರಾದ ಇವರು ವೀರಕಂಬ ಗಿಲ್ಕಿಂಜತಾಯಿ ದೇವಸ್ಥಾನದ ಆಡಳಿತ ಮಂಡಳಿಯ ಸಕ್ರಿಯ ಸದಸ್ಯರಾಗಿದ್ದು, ವೀರಕಂಭ ಗ್ರಾಮ ಪಂಚಾಯತಿನ ಮಾಜಿ ಸದಸ್ಯರು.

ಪ್ರಸ್ತುತ ವೀರಕಂಭ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ವೀರಕಂಭ ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು ಇವರು ಪತ್ನಿ , ಇಬ್ಬರು ಪುತ್ರ ರು ಹಾಗೂ ಅಪಾರ ಬಂಧುಬಳಗದವರನ್ನು ಅಗಲಿದ್ದಾರೆ.

- Advertisement -

Related news

error: Content is protected !!