Monday, June 15, 2026
spot_imgspot_img
spot_imgspot_img

ಆಸ್ಪತ್ರೆಗೆ ಭೇಟಿ ನೀಡಿ ಚೂರಿ ಇರಿತಕ್ಕೊಳಗಾದ ಬಿಜೆಪಿ ಕಾರ್ಯಕರ್ತರ ಆರೋಗ್ಯ ವಿಚಾರಿಸಿದ ಕಲ್ಲಡ್ಕ ಪ್ರಭಾಕರ್ ಭಟ್‌ : ವಿಜಯೋತ್ಸವ ಆಚರಿಸಿ ಮರಳುತ್ತಿದ್ದ ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿತ ಪ್ರಕರಣದ ಐವರು ಆರೋಪಿಗಳು ಅರೆಸ್ಟ್‌

- Advertisement -
- Advertisement -

ಮುಡಿಪು : ಬೊಳಿಯಾರ್ ನಲ್ಲಿ ಚೂರಿ ಇರಿತಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಕಾರ್ಯಕರ್ತರ ಬಳಿ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್‌ ಹಾಗೂ ಅವರ ಪತ್ನಿ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು ಎಂದು ತಿಳಿದು ಬಂದಿದೆ.

ಬಿಜೆಪಿ ವಿಜಯೋತ್ಸವ ಆಚರಿಸಿ ಮರಳುತ್ತಿದ್ದ ಬಿಜೆಪಿ ಕಾರ್ಯಕರ್ತರಿಬ್ಬರಿಗೆ ಚೂರಿ ಇರಿತ ಪ್ರಕರಣ ನಡೆದ ಘಟನೆಯಲ್ಲಿ ಒಟ್ಟು ಐವರು ಆರೋಪಿಗಳನ್ನು ಕೊಣಾಜೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಶಾಕೀರ್(28), ಅಬ್ದುಲ್ ರಜಾಕ್(40), ಅಬೂಬಕ್ಕರ್ ಸಿದ್ದಿಕ್(35), ಸವಾದ್(18) ಹಾಗೂ ಹಫೀಝ್(24) ಎಂದು ಗುರುತಿಸಲಾಗಿದೆ.

ಕೊಣಾಜೆ ಠಾಣಾ ವ್ಯಾಪ್ತಿಯ ಬೊಳಿಯಾರ್ ಬಾರ್‌ನ ಮುಂಭಾಗದಲ್ಲಿ ಚಾಕು ಇರಿತ ನಡೆದಿದ್ದು, ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೂವರು ಬಿಜೆಪಿ ಕಾರ್ಯಕರ್ತರು ಬೋಳಿಯಾ‌ರ್ ಮಸೀದಿಯ ಮುಂದೆ ಹೋಗುವಾಗ ಘೋಷಣೆಗಳನ್ನು ಕೂಗಿದ್ದಾರೆ ಇದಕ್ಕೆ ಪ್ರತಿಯಾಗಿ ಈ ಘಟನೆ ನಡೆದಿದೆ ಎನ್ನಲಾಗಿದೆ.

- Advertisement -

Related news

error: Content is protected !!