Wednesday, July 2, 2025
spot_imgspot_img
spot_imgspot_img

ಪದವಿ ವಿಭಾಗದ ನೂತನ ‘ಪ್ರೇರಣಾ’ ಸಭಾಭವನದ ಉದ್ಘಾಟನೆ ಮತ್ತು ಪ್ರವೇಶೋತ್ಸವ ಕಾರ್ಯಕ್ರಮ

- Advertisement -
- Advertisement -

ಕಲ್ಲಡ್ಕ: ಇಂದು ಪದವಿ ವಿಭಾಗದ ನೂತನ ‘ಪ್ರೇರಣಾ’ ಸಭಾಭವನದ ಉದ್ಘಾಟನಾ ಕಾರ್ಯಕ್ರಮ ಮತ್ತು ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಪ್ರವೇಶೋತ್ಸವ ಅಗತ-ಸ್ವಾಗತ ಕಾರ್ಯಕ್ರಮ ನಡೆಯಿತು.

ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಇವರು ಸಭಾಭವನವನ್ನು ಉದ್ಘಾಟಿಸಿ, ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು, ಕಾರ್ಯಕ್ರಮದ ಮುಖ್ಯ ಅಥಿತಿಯಾದ ವಿವೇಕಾನಂದ ಪದವಿ ಮಹಾವಿದ್ಯಾಲಯದ ಸಂಚಾಲಕರಾದ ಮುರಳಿ ಕೃಷ್ಣ ಇವರು ನಮ್ಮ ಸಾಂಸ್ಕೃತಿಕ ವೈಭವವನ್ನು ಪುನರ್ ಸ್ಥಾಪಿಸಲು ವಿದ್ಯಾರ್ಥಿಗಳು ಪಣತೊಡಬೇಕು ಎಂದು ಕರೆನೀಡಿದರು.

ಕಾರ್ಯಕ್ರಮದಲ್ಲಿ ವಿದ್ಯಾಕೇಂದ್ರದ ಅಧ್ಯಕ್ಷರಾದ ನಾರಾಯಣ ಸೋಮಯಾಜಿ, ಸಂಚಾಲಕರಾದ ವಸಂತ ಮಾಧವ ಶ್ರೀಮಾನ್ ಹಾಗೂ ಪದವಿ ವಿಭಾಗದ ಪ್ರಾಂಶುಪಾಲರಾದ ಕೃಷ್ಣ ಪ್ರಸಾದ ಕಾಯರ ಕಟ್ಟೆ ಇವರು ಉಪಸ್ಥಿತರಿದ್ದರು.

- Advertisement -

Related news

error: Content is protected !!