Thursday, March 28, 2024
spot_imgspot_img
spot_imgspot_img

ಕಲ್ಲಡ್ಕ ಶ್ರೀರಾಮ ವೇದವ್ಯಾಸ ಧ್ಯಾನ ಮಂದಿರದಲ್ಲಿ ಕೊಡುಗೆ ಪ್ರದಾನ ಕಾರ್ಯಕ್ರಮ

- Advertisement -G L Acharya panikkar
- Advertisement -

ಕಲ್ಲಡ್ಕ: ಮಾ.8 ರಂದು ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನ ಮಂದಿರದಲ್ಲಿ ಕೊಡುಗೆ ಪ್ರದಾನ ಕಾರ್ಯಕ್ರಮ ನಡೆಯಿತು.


‘ಭಾರತೀಯ ಸಂಸ್ಕೃತಿಯ ಜೀವನಾದರ್ಶಗಳಲ್ಲಿ ಯಾವ ಪ್ರತಿಫಲಾಪೇಕ್ಷೆ ಯು ಇಲ್ಲದೆ ಉದಾರವಾಗಿ ನೀಡುವ ಕೊಡುಗೆಯೇ ದಾನ. ಇಂತಹ ಸಂಗತಿ ಭಗವದ್ಗೀತೆಯಲ್ಲಿಯೂ ಇದೆ ನಮಗೆ ಗೊತ್ತಿಲ್ಲದ ಅನೇಕ ಋಣಗಳನ್ನು ಇದರ ಮೂಲಕ ವಿಮೋಚನೆ ಮಾಡಿಕೊಳ್ಳಬಹುದು. ಸಮಾಜದಲ್ಲಿ ಅಗತ್ಯವಿರುವವರಿಗೆ,ದುರ್ಬಲರಿಗೆ ಸೂಕ್ತ ಕಾಲದಲ್ಲಿ ಸಹಾಯಕ್ಕೆ ನಿಲ್ಲುವುದೇ ನಮ್ಮ ಶಿಕ್ಷಣದ ಮೂಲ ಉದ್ದೇಶವಾಗಿದೆ. ಅಂತಹ ಚಿಂತನೆಗಳನ್ನು ನೀವು ಪ್ರಾರ್ಥಮಿಕ ಹಂತದಲ್ಲಿ ಬೆಳೆಸಿಕೊಂಡಿರುವುದು ಮುಂದಿನ ದಿನಗಳಲ್ಲಿ ಸಮಾಜಕ್ಕೆ ಇನ್ನಷ್ಟು ಹೆಚ್ಚು ಶಕ್ತಿ ತುಂಬುವಲ್ಲಿ ನಿಮ್ಮ ಪಾತ್ರ ಹಿರಿದಾಗಿರುತ್ತದೆ’ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ ಪ್ರಭಾಕರ್ ಭಟ್ ಕಲ್ಲಡ್ಕ ಹೇಳಿದರು.


ಪ್ರಾಥಮಿಕ ಶಿಕ್ಷಣ ಮುಗಿಸಿ ಪ್ರೌಢ ಶಿಕ್ಷಣ ಪಡೆಯುತ್ತಿರುವ 2019 – 20 ನೇ ಸಾಲಿನ ಏಳನೇ ತರಗತಿಯ ವಿದ್ಯಾರ್ಥಿಗಳು ತಾವು ಕಲಿತ ಪ್ರಾಥಮಿಕ ಶಾಲೆಗೆ ತಮ್ಮ ಕೈಲಾದ ಕೊಡುಗೆಯನ್ನು ನೀಡಿದರು.


ಈ ಸಂದರ್ಭದಲ್ಲಿ ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕರಾದ ವಸಂತಮಾಧವ, ರಾಷ್ಟ್ರ ಸೇವಿಕಾ ಸಮಿತಿಯ ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯಕಾರಿಣಿ ಸದಸ್ಯರಾಗಿರುವ ಕಮಲ ಪ್ರಭಾಕರ್ ಭಟ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಶ್ರೀರಾಮ ವಿದ್ಯಾಕೇಂದ್ರದ ಆಡಳಿತ ಮಂಡಳಿಯ ಸದಸ್ಯರಾದ ಚೆನ್ನಪ್ಪ ಆರ್ ಕೋಟ್ಯಾನ್ ಹಾಗೂ ಮುಖ್ಯೋಪಾಧ್ಯಾಯರಾದ ರವಿರಾಜ್ ಕಣಂತೂರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಚಂದ್ರಕಲ ನಿರೂಪಿಸಿ ,ಮೇಘ ಸ್ವಾಗತಿಸಿ, ದೀಕ್ಷಾ ಧನ್ಯವಾದ ಸಮರ್ಪಿಸಿದರು.

- Advertisement -

Related news

error: Content is protected !!