Wednesday, April 24, 2024
spot_imgspot_img
spot_imgspot_img

ಕಲ್ಲಡ್ಕ: ಟ್ಯಾಂಕರ್, ಅಂಬ್ಯುಲೆನ್ಸ್ ಹಾಗೂ‌ ಬೈಕ್ ಗಳ ನಡುವೆ ಭೀಕರ ಅಪಘಾತ; ಐವರಿಗೆ ಗಾಯ

- Advertisement -G L Acharya panikkar
- Advertisement -

ಕಲ್ಲಡ್ಕ: ಟ್ಯಾಂಕರ್, ಅಂಬ್ಯುಲೆನ್ಸ್ ಹಾಗೂ‌ ಬೈಕ್ ನಡುವೆ ಕಲ್ಲಡ್ಕ ‌ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ನಡೆದ ಅಪಘಾತದಲ್ಲಿ ಐವರು‌ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.

ಮಡಿಕೇರಿ ಕಡೆಯಿಂದ ಮಂಗಳೂರು ಆಸ್ಪತ್ರೆಗೆ ರೋಗಿಯನ್ನು ಕರೆತರುತ್ತಿದ್ದ ಅಂಬ್ಯುಲೆನ್ಸ್ ಹಾಗೂ ಟ್ಯಾಂಕರ್ ಹಾಗೂ ಬೈಕ್ ಮಧ್ಯೆ ಡಿಕ್ಕಿಯಾಗಿದೆ.

ಅಂಬ್ಯುಲೆನ್ಸ್ ನಲ್ಲಿದ್ದ ನಾಲ್ವರಿಗೂ ಗಾಯಗಳಾಗಿದ್ದು, ಓರ್ವನಿಗೆ ಗಂಭೀರ ಗಾಯವಾಗಿದೆ. ಆದರೆ ಅಂಬ್ಯುಲೆನ್ಸ್ ವಾಹನದಲ್ಲಿದ್ದ ಯಾರಿಗೆ ಗಂಭೀರ ಗಾಯವಾಗಿದೆ ಎಂಬ ಮಾಹಿತಿ ಲಭಿಸಿಲ್ಲ.

ಬೈಕ್ ಸವಾರನಿಗೂ ಗಾಯವಾಗಿದ್ದು ಆತನ ಬಗ್ಗೆಯೂ ಸ್ಪಷ್ಟವಾದ ಮಾಹಿತಿ ಲಭಿಸಿಲ್ಲ. ಗಾಯಗೊಂಡವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಸಿಗಬೇಕಾಗಿದೆ. ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!