Wednesday, June 17, 2026
spot_imgspot_img
spot_imgspot_img

ಮೂಡುಬಿದಿರೆ: ಕಂಬಳ ಓಟಗಾರ ಶ್ರೀನಿವಾಸ್ ಗೌಡರಿಗೆ ಅವಾಚ್ಯ ಶಬ್ದಗಳಿಂದ ನಿಂಧನೆ; ಆರೋಪಿಯ ವಿರುದ್ಧ ದೂರು ದಾಖಲು

- Advertisement -
- Advertisement -

ಮೂಡುಬಿದಿರೆ: ತುಳುನಾಡಿನ ಸಾಂಪ್ರದಾಯಿಕ ಕ್ರೀಡೆ ಕಂಬಳ ಕ್ಷೇತ್ರದಲ್ಲಿ ಅತೀ ವೇಗದ ಓಟಗಾರನೆಂದು ಹೆಗ್ಗಳಿಕೆಗಳಿಸಿರುವ ಅಶ್ವತ್ಥಪುರದ ಶ್ರೀನಿವಾಸ ಗೌಡ ರವರಿಗೆ ಪ್ರಶಾಂತ್ ಎಂಬಾತ ದೂರವಾಣಿ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂಧಿಸಿದ್ದು, ಆಡಿಯೋ ವೈರಲ್ ಆಗಿದೆ.

ಆರೋಪಿಯ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಲಾಗಿದೆ.

ದೂರವಾಣಿ ಕರೆಯ ಮುಖಾಂತರ ನಿಂದಿಸಿರುವ ಆರೋಪಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕಂಬಳ ಕೋಣಗಳ ಯಜಮಾನರು ಹಾಗೂ ಶ್ರೀನಿವಾಸ ಗೌಡರ ಅಭಿಮಾನಿಗಳು ಮೂಡುಬಿದಿರೆ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಿದ್ದಾರೆ. ಅಲ್ಲದೆ, ಆರೋಪಿಯ ವಿರುದ್ಧ ಕ್ರಮಕ್ಕೆ ಪೊಲೀಸರಿಗೆ ಶಾಸಕ ಉಮಾನಾಥ ಕೋಟ್ಯಾನ್ ಕೂಡ ಸೂಚನೆ ನೀಡಿದ್ದಾರೆ.

ಕಂಬಳದ ಕುರಿತು ಪ್ರಶಾಂತ್ ಎಂಬಾತನ ಜೊತೆ ದೂರವಾಣಿಯಲ್ಲಿ ಮಾತನಾಡುತ್ತಿದ್ದಾಗ, ಆತ ತನ್ನನ್ನು, ತನ್ನ ಕುಟುಂಬದವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿರುವುದಾಗಿ ಶ್ರೀನಿವಾಸ ಗೌಡ ರವರು ಮೂಡುಬಿದಿರೆ ಪೊಲೀಸರಿಗೆ ದೂರು ನೀಡಿದ್ದಾರೆ. ಇನ್ನೊಂದೆಡೆ ಕಂಬಳ ಕ್ಷೇತ್ರದ ಸಾಧಕನನ್ನು ಅವಹೇಳನ ಮಾಡಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಕಂಬಳಾಭಿಮಾನಿಗಳು ಕೃತ್ಯವನ್ನು ಖಂಡಿಸಿದ್ದಾರೆ.

- Advertisement -

Related news

error: Content is protected !!